ಕನ್ಯಾನ ಬಂಡಿತ್ತಡ್ಕ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯೋತ್ಸ ಸಹಿತ ವಿವಿಧ ಕಾರ್ಯಕ್ರಮ

Upayuktha
0


ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯೋತ್ಸವ, ಆಟಿದ ಕೂಟ ಹಾಗೂ ಗಣಿತ ಮೆಟ್ರಿಕ್ ಮೇಳವನ್ನು ಅದ್ದೂರಿಯಾಗಿ ಆಚರಿಸಲಾಯಿತು.  ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಕಮರುನ್ನಿಸ ದ್ವಜಾರೋಹಣ ಮಾಡಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.


ಕಾರ್ಯಕ್ರಮದಲ್ಲಿ  ಕನ್ಯಾನ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷರಾದ ರೇಖಾ ರಮೇಶ್, ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಕೃಷ್ಣಕುಮಾರ್ ಕಮ್ಮಜೆ, ಅಧ್ಯಕ್ಷ ಇಸ್ಮಾಯಿಲ್ ಕುಕ್ಕಾಜೆ, ಮಹಮ್ಮದ್ ಅಲಿ, ಸಿಆರ್‍ಪಿ ಚಂದ್ರಶೇಖರ್, ಗ್ರಾಮಪಂಚಾಯತ್ ಮಾಜಿ ಸದಸ್ಯೆ ಬುಶ್ರಿಯ ಕನ್ಯಾನ, ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ಡಿ. ಕೆ ಶಾಹುಲ್ ಹಮೀದ್ , ಕನ್ಯಾನ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ರೋಹಿತ್ ಉಪಸ್ಥಿತರಿದ್ದರು.


ಪ್ರಸಕ್ತ ವರ್ಷದಲ್ಲಿ ಶಾಲೆಗೆ ದಾಖಲಾತಿ ಪಡೆದ 13 ವಿದ್ಯಾರ್ಥಿಗಳ ಖಾತೆಗೆ ಠೇವಣಿ ಇಟ್ಟ ಪ್ರತಿಗಳನ್ನು   ಹಿರಿಯ ವಿದ್ಯಾರ್ಥಿ ಸಂಘದಿಂದ ಮಕ್ಕಳ ಪೋಷಕರಿಗೆ ಹಸ್ತಾಂತರಿಸಲಾಯಿತು.  ಮಕ್ಕಳ ಪೋಷಕರು ಅಟಿಕೂಟದಲ್ಲಿ ಸುಮಾರು 30ಕ್ಕೂ ಹೆಚ್ಚು ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸಿ ಆಟಿಕೂಟಕ್ಕೆ ಹೊಸ ಮೆರುಗನ್ನು ತಂದರು. ಗಣಿತ ಮೆಟ್ರಿಕ್ ಮೇಳದಲ್ಲಿ 24 ಮಂದಿ ವಿದ್ಯಾರ್ಥಿಗಳು ಐದು ತಂಡಗಳಾಗಿ ವ್ಯಾಪಾರ ವಹಿವಾಟು ನಡೆಸಿದರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸೆಕೀನ ಎಸ್ ಪ್ರಾಸ್ತಾವನೆಗೈದು ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಶಾರದಾ ಕೇಪುಳಗುಡ್ಡೆ ಧನ್ಯವಾದ ಸಮರ್ಪಿಸಿದರು. ಶಿಕ್ಷಕಿ ವನಿತಾ ಕನ್ಯಾನ ಕಾರ್ಯಕ್ರಮ ನಿರೂಪಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top