ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಪಾಂಡೇಶ್ವರ ಕ್ಯಾಂಪಸ್‌ನಲ್ಲಿ 15 ಆಗಸ್ಟ್ 2026 ರಂದು 80 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ ಮತ್ತು ದೇಶಭಕ್ತಿಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಗೌರವಾನ್ವಿತ ಮುಖ್ಯ ಅತಿಥಿಗಳಾದ ಶ್ರೀನಿವಾಸ ವಿಶ್ವವಿದ್ಯಾಲಯದ ಅಭಿವೃದ್ಧಿ ರಿಜಿಸ್ಟ್ರಾರ್ ಡಾ.ಅಜಯ್ ಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಕ್ಕೆ ಗೌರವವಾಗಿ ಮುಂದಿನ ಪೀಳಿಗೆಯು ಆರ್ಥಿಕವಾಗಿ, ತಾಂತ್ರಿಕವಾಗಿ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಬೇಕೆಂದು ಕರೆ ನೀಡಿದರು.
ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಡೀನ್ ಡಾ. ತ್ರಿಶಲಾ ನೊರೊನ್ಹಾ, ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಆಂಡ್ ಟೂರಿಸಂ ಡೀನ್ ಪ್ರೊ. ಬಿ. ಪ್ರಶಾಂತ್ ಪ್ರಭು, ಇನ್ಸ್ಟಿಟ್ಯೂಟ್ ಆಫ್ ಆಕ್ಯುಪೇಷನಲ್ ಥೆರಪಿ ಡೀನ್ ಡಾ. ಪ್ರಾಂಜಲಿ ಮ್ಹಾತ್ರೆ ಹಾಗೂ ಬೋಧಕ ವೃಂದದವರು ಉಪಸ್ಥಿತರಿದ್ದರು.
ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಆಂಡ್ ಕಾಮರ್ಸ್ ಡೀನ್ ಡಾ. ವೆಂಕಟೇಶ್ ಅಮಿನ್ ಸ್ವಾಗತಿಸಿದರು,
ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಡೀನ್ ಡಾ. ಪದ್ಮನಾಭ ಸಿ.ಹೆಚ್. ವಂದಿಸಿದರು. ಪ್ರೊ. ಉಷಾ ಕಾರ್ಯಕ್ರಮವನ್ನು ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

%20(2).png)