ಆ.9 ರಂದು ಸುರತ್ಕಲ್ ಬಂಟರ ಸಂಘದಲ್ಲಿ ಆಟಿದ ಪೊರ್ಲು, ಅಭಿನಂದನಾ ಕಾರ್ಯಕ್ರಮ

Upayuktha
0

 



ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ ಆಗಸ್ಟ್ 9 ರಂದು ಭಾನುವಾರ ಬೆಳಿಗ್ಗೆ 10.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ಆಟಿದ ಪೊರ್ಲು ಮತ್ತು ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಮುಂಬೈ ವಿ.ಕೆ.ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಡಾ ವೈ ಭರತ್ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಎಮ್ ಕರುಣಾಕರ ಶೆಟ್ಟಿ, ಬಂಟವಾಳ ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಕಟೀಲು ತುಳು ವಲ್ಡ್೯ ಫೌಂಡೇಶನ್ ನ ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು, ಭಾಗವಹಿಸಲಿದ್ದಾರೆ. ಪ್ರೊಫೆಸರ್ ಅಕ್ಷಯ ಆರ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮಹಿಳಾ ವೇದಿಕೆಯ ಅಧ್ಯಕ್ಷೆ ಸರೋಜ ಟಿ ಶೆಟ್ಟಿ ಉಪಸ್ಥಿತರಿರುವರು.


ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಗುವುದು. ಕೃಷಿ ಕ್ಷೇತ್ರದಲ್ಲಿ ವಾಮನ ಶೆಟ್ಟಿ ಸೂರಿಂಜೆ, ಸಾಹಿತ್ಯ- ರಂಗಭೂಮಿ ಕ್ಷೇತ್ರದಲ್ಲಿ ಗೀತಾ ಸುರತ್ಕಲ್, ಭರತನಾಟ್ಯ ಕ್ಷೇತ್ರದಲ್ಲಿ ಚಂದ್ರಶೇಖರ ನಾವಡ ಚೇಳ್ಯಾರ್, ಲಲಿತಕಲೆ ಕ್ಷೇತ್ರದಲ್ಲಿ ಧನಪಾಲ್ ಶೆಟ್ಟಿಗಾರ್ ತಡಂಬೈಲ್, ಗುಡಿ ಕೈಗಾರಿಕೆ ಕ್ಷೇತ್ರದಲ್ಲಿ ವಾರಿಜ ಡಿ ಬಂಗೇರ ಕುಳಾಯಿ ಇವರನ್ನು ಸನ್ಮಾನಿಸಲಾಗುವುದು.


ಕಾರ್ಯಕ್ರಮ ಬೆಳಿಗ್ಗೆ 9.30 ರಿಂದ ಪ್ರಾರಂಭಗೊಳ್ಳಲಿದೆ. ಸಂಘದ ಮಹಿಳಾ ಸದಸ್ಯರಿಂದ ಮತ್ತು ಮಕ್ಕಳಿಂದ ಗ್ರಾಮವಾರು ಜಾನಪದ ನೃತ್ಯ, ರೂಪಕ ಪ್ರದರ್ಶನಗೊಳ್ಳಲಿದೆ.


ಕಾರ್ಯಕ್ರಮದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಪುರುಷರಿಗೆ ತೆಂಗಿನಕಾಯಿ ಕುಟ್ಟುವುದು, ಮುಂಡಾಸು ಕಟ್ಟುವುದು, ಮಹಿಳೆಯರಿಗೆ ಹಿಡಿಸೂಡಿ ತಯಾರಿಸುವುದು, ಮಡಲು ಹೆಣೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸಭಾ ಕಾರ್ಯಕ್ರಮದ ನಂತರ ಆಟಿಯ ವಿಶೇಷ ಭೋಜನದ ಬಳಿಕ ಸಂಘದ ಸದಸ್ಯರಿಂದ ಸಾಂಸ್ಜೃತಿಕ ಕಾರ್ಯಕ್ರಮ, ರಸಪ್ರಶ್ನೆ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top