ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ನ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ರಾಜ್ಯ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಸ್ಕೌಟ್ ವಿಭಾಗದಲ್ಲಿ ಪ್ರಥಮ ಪಿಯುಸಿಯ ಹಿಮಾಂಶು ಎಲ್ ಶೆಟ್ಟಿ, ಪ್ರಿಯಾಂಶು ರಾವ್, ನಿಖಿಲ್, ಪರೀಕ್ಷಿತ್ ಕೆ ಪಿ ಹಾಗೂ ಗೈಡ್ಸ್ ವಿಭಾಗದಲ್ಲಿ ಮಂದಿರಾ ಕಜೆ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ನಡೆಸಿದ ೨೦೨೪-೨೫ನೇ ಸಾಲಿನ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದಕ ಹಾಗೂ ಪ್ರಶಸ್ತಿ ಪತ್ರ ಪಡೆದ್ದಾರೆ.
ವಿದ್ಯಾರ್ಥಿಗಳಿಗೆ ಸಂಸ್ಥೆಯ ಸ್ಕೌಟ್ ಶಿಕ್ಷಕ ಸತೀಶ್ ಇರ್ದೆ ಹಾಗೂ ಗೈಡ್ಸ್ ಶಿಕ್ಷಕಿ ಚಂದ್ರಕಲಾ ಮಾರ್ಗದರ್ಶನ ನೀಡಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


