ಇಂದು ವಿಶ್ವ ಜಿನೇವಾ ಒಪ್ಪಂದ ದಿನಾಚರಣೆ

Upayuktha
0

 


ಮಂಗಳೂರು: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಯೂತ್ ರೆಡ್‌ಕ್ರಾಸ್ ಘಟಕ ಮತ್ತು ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಸಹಯೋಗದಲ್ಲಿ ಆ.12ರಂದು ಬೆಳಗ್ಗೆ 11.30ಕ್ಕೆ ವಿಶ್ವ ಜಿನೇವಾ ಒಪ್ಪಂದ ದಿನಾಚರಣೆ ದೇರಳಕಟ್ಟೆಯ ಎ.ಬಿ.ಶೆಟ್ಟೆ ಸ್ಮಾರಕ ದಂತ ವಿಜ್ಞಾನ ಮಹಾವಿದ್ಯಾಲಯದ ಆವಿಷ್ಕಾರ್ ಸಭಾಂಗಣದಲ್ಲಿ ನಡೆಯಲಿದೆ.


ನಿಟ್ಟೆ ಪರಿಗಣಿತ ವಿ.ವಿ.ಯ ಉಪಕುಲಪತಿ ಪ್ರೊ.ಡಾ.ಎಂ.ಎಸ್. ಮೂಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ. ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.


ದ.ಕ.ಜಿಲ್ಲಾ ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಕರ್ನಲ್ ಎ.ಕೆ.ಜಯಚಂದ್ರನ್ ಗೌರವ ಅತಿಥಿಯಾಗಿ ಹಾಗೂ ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ.ಬಿ.ಸಚ್ಚಿದಾನಂದ ರೈ, ಕಾರ್ಯದರ್ಶಿ ಡಾ. ಸತೀಶ್‌ಕುಮಾರ್ ಶೆಟ್ಟಿ, ಖಜಾಂಜಿ ಗುರುದತ್ ನಾಯಕ್ ಮತ್ತು ಯೂತ್ ರೆಡ್‌ಕ್ರಾಸ್ ಉಪ ಸಮಿತಿ ನಿರ್ದೇಶಕಿ ಡಾ.ಸುಮನಾ.ಬಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top