ಕಾಪು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು, ಇಲ್ಲಿಯ ಮಾದಕ ವ್ಯಸನ ಮುಕ್ತ ಜಾಗೃತಿ ಸಮಿತಿ , ಐಕ್ಯೂಎಸಿ ಇದರ ಜಂಟಿ ಆಶ್ರಯದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನದ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಗೋಪಾಲಕೃಷ್ಣಎಂ. ಗಾಂವ್ಕರ್
ವಹಿಸಿದ್ದರು. ರಜನಿ, ಸಹಾಯಕ ಕಾನೂನು ನೆರವು ರಕ್ಷಣಾ
ಸಲಹೆಗಾರರು, ಡಿಎಲ್‌ಎಸ್‌ಎ ಉಡುಪಿ ಇವರು ವಿದ್ಯಾರ್ಥಿಗಳಿಗೆ ಮಾದಕ ವ್ಯಸನದಿಂದ ಆಗುವ ದುಷ್ಪಾರಿಣಾಮ
ಮತ್ತು ಕಾನೂನಿನ ಅಡಿಯಲ್ಲಿ ಆಗುವ ಶಿಕ್ಷೆಯ ಬಗ್ಗೆ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳಿಗೆ ಪೋಕ್ಸೋ
ಕಾಯಿದೆಯ ಬಗ್ಗೆ ವಿವರಿಸಿದರು. ಮಾದಕ ದ್ರವ್ಯ ಜಾಗೃತ ಸಮಿತಿಯ ಸಂಯೋಜಕಿ ಸವಿತಾ, ಸದಸ್ಯ ಡಾ. ರಾಘವ ನಾಯ್ಕ, ಐಕ್ಯೂಎಸಿ ಸಂಚಾಲಕಿ ಡಾ.
ರೋಶ್ನಿ ಯಶವಂತ್, ಎಲ್ಲಾ ಬೋಧಕ ಮತ್ತು ಬೋಧಕೇತರ ವೃಂದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


