ಶಿವಮೊಗ್ಗ: ನಗರದ KAPMI ನರ್ಸಿಂಗ್ ಕಾಲೇಜಿನಲ್ಲಿ ಡಿಪ್ಲೊಮಾ ಇನ್ ಹಾಸ್ಪಿಟಲ್ ನರ್ಸಿಂಗ್ ಅಂಡ್ ಮಿಡ್‌ವೈಫರಿ (DHNM) ವಿದ್ಯಾರ್ಥಿಗಳಿಗಾಗಿ ಇಂದು ಡಿಪ್ಲೋಮಾ ಪದವಿ ಪ್ರಮಾಣಪತ್ರ ವಿತರಣಾ ಸಮಾರಂಭವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಮಾನಸ ಟ್ರಸ್ಟ್‌ನ ನಿರ್ದೇಶಕಿ ರಜನಿ ಎ. ಪೈ ಮುಖ್ಯ ಅತಿಥಿಯಾಗಿ ಭಾಗವಹಿಸಿ,
ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಮಾತನಾಡುತ್ತಾ, ತಮ್ಮ ಸಂದೇಶದಲ್ಲಿ ವಿದ್ಯಾರ್ಥಿಗಳು
ಉತ್ತಮ ಸೇವಾ ಮನೋಭಾವ, ಶಿಸ್ತು ಹಾಗೂ ವೃತ್ತಿಪರ ಕೌಶಲ್ಯಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಗುಣಮಟ್ಟದ
ಆರೋಗ್ಯ ಸೇವೆಯನ್ನು ನೀಡಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ರಾಮಚಂದ್ರ ಬಾಳಿಗ, ಡಾ. ರಾಜೇಂದ್ರ ಚೆನ್ನಿ ಹಾಗೂ ಅನ್ನಪೂರ್ಣ ಉಪಸ್ಥಿತರಿದ್ದು
ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಅವರ ಉಜ್ವಲ ಭವಿಷ್ಯಕ್ಕಾಗಿ ಶುಭಾಶಯಗಳನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಮಲ್ಲಿಕಾರ್ಜುನ ಎಸ್. ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು
ಯಶಸ್ವಿಗೊಳಿಸಿದರು. ಪ್ರಮಾಣಪತ್ರ ಸ್ವೀಕರಿಸಿದ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿ, ಕಾಲೇಜಿನ ಆಡಳಿತ
ಮಂಡಳಿ ಹಾಗೂ ಅಧ್ಯಾಪಕರಿಗೆ ಕೃತಜ್ಞತೆ ಸಲ್ಲಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


