ಸೆ. 26ರವರೆಗೆ ಧಾರ್ಮಿಕ–ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿ
ಬೆಂಗಳೂರು: ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನದ ಪರಂಪರೆಗೆ ಸೇರಿದ ಕೋಲಾರ ಜಿಲ್ಲೆಯ ತಂಬಿಹಳ್ಳಿಯ ಶ್ರೀಮನ್ಮಧ್ವಾಚಾರ್ಯರ ಸಾಕ್ಷಾತ್ ಶಿಷ್ಯರಾದ ಚತುರ್ವೇದಭಾಷ್ಯಾಚಾರ್ಯ ಶ್ರೀಮನ್ಮಾಧವತೀರ್ಥ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ವಿದ್ಯಾವಲ್ಲಭ ಮಾಧವತೀರ್ಥ ಶ್ರೀಪಾದರ 6ನೇ ಚಾತುರ್ಮಾಸ್ಯ ಮಹೋತ್ಸವವು ಆಗಸ್ಟ್ 8ರಿಂದ ಸೆಪ್ಟೆಂಬರ್ 26ರವರೆಗೆ ಬೆಂಗಳೂರಿನ ಯಲಹಂಕ–ದೊಡ್ಡಬಳ್ಳಾಪುರ ರಸ್ತೆಯ ರಾಜಾನುಕುಂಟೆ ಸಮೀಪದ ಕಾಕೋಳು ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿದೆ.
ಶ್ರೀಪಾದರಾಜ ಪ್ರತಿಷ್ಠಿತ ಬೃಂದಾವನಾಂತರ್ಗತ ಚತುರ್ಭುಜ ಶ್ರೀ ವೇಣುಗೋಪಾಲಸ್ವಾಮಿ ಹಾಗೂ ಶ್ರೀ ವ್ಯಾಸರಾಜರಿಂದ ಪ್ರತಿಷ್ಠಾಪಿತ ಕಂಬದ ಆಂಜನೇಯಸ್ವಾಮಿಯ ದಿವ್ಯಸನ್ನಿಧಿಯಲ್ಲಿ ಚಾತುರ್ಮಾಸ್ಯ ಮಹೋತ್ಸವ ನಡೆಯಲಿದೆ. ಪಾಂಚಜನ್ಯ ಪ್ರತಿಷ್ಠಾನ ಹಾಗೂ ತಿರುಮಲ ತಿರುಪತಿ ದೇವಸ್ಥಾನದ ಹಿಂದೂ ಧರ್ಮ ಪ್ರಚಾರ ಪರಿಷತ್ ಸಹಯೋಗದಲ್ಲಿ ಶ್ರೀಮಠದ ಉಪಾಸ್ಯಮೂರ್ತಿಯಾದ ಶ್ರೀ ವೀರರಾಮದೇವರಿಗೆ ಪ್ರತಿದಿನ ವಿಶೇಷ ಪೂಜೆ, ಪಾರಾಯಣ, ಪ್ರವಚನ, ಭಜನೆ, ದಾಸವಾಣಿ ಸೇರಿದಂತೆ ವಿವಿಧ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಸೆಪ್ಟೆಂಬರ್ 25ರಂದು ಸಾಮೂಹಿಕ ಅನಂತಪದ್ಮನಾಭ ವ್ರತ ಜರುಗಲಿದ್ದು, ಸೆಪ್ಟೆಂಬರ್ 26ರಂದು ಭಾದ್ರಪದ ಪೂರ್ಣಿಮೆಯಂದು ಚಾತುರ್ಮಾಸ್ಯ ವ್ರತ ಸಮಾಪ್ತಿ, ಸೀಮೋಲ್ಲಂಘನ ಹಾಗೂ ಸಮಾರೋಪ ಸಮಾರಂಭ ನೆರವೇರಲಿದೆ ಎಂದು ಚಾತುರ್ಮಾಸ್ಯ ಸ್ವಾಗತ ಸಮತಿ ಗೌರವಾಧ್ಯಕ್ಷ ಕೆ.ವಿ.ಗೋಪಾಲಕೃಷ್ಣ ಮತ್ತು ಶ್ರೀಮಠದ ಕಾರ್ಯದರ್ಶಿ ಭದ್ರಾವತಿ ಕೃಷ್ಣಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಾತುರ್ಮಾಸ್ಯದ ಅವಧಿಯಲ್ಲಿ ವಿವಿಧ ಸೇವೆಗಳಲ್ಲಿ ಪಾಲ್ಗೊಳ್ಳಲು ಆಸಕ್ತ ಭಕ್ತರು 91418 26180 ಹಾಗೂ 63642 59787 ಸಂಖ್ಯೆಗೆ ಸಂಪರ್ಕಿಸಬಹುದು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.jpeg)
