ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ 2026 ಯಶಸ್ವಿ ಮುಕ್ತಾಯ

Upayuktha
0

 ನಾಡೋಜ ಡಾ.ಕಯ್ಯಾರ ಸದ್ಭಾವನಾ  ರಾಷ್ಟ್ರೀಯ ಪ್ರಶಸ್ತಿ ಪ್ರದಾನ



ಕಾಸರಗೋಡು:  ಇತ್ತೀಚೆಗೆ ಗಡಿನಾಡು ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮದ ಸಮಾರೋಪ ಸಮಾರಂಭ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ನಡೆಯಿತು. ಈ ಸಂದರ್ಭದಲ್ಲಿ ಸಾಹಿತಿ, ಸಂಘಟಕಿ, ಸಂಪನ್ಮೂಲ ವ್ಯಕ್ತಿ, ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ ಡಾ.ಶಾಂತಾ ಪುತ್ತೂರು ರವರಿಗೆ ನಾಡೋಜ ಡಾ.ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ 2026ನ್ನು ಎಡನೀರು ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಹಸ್ತಗಳಿಂದ ಪ್ರದಾನ ಮಾಡಲಾಯಿತು.


ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಕಾಸರಗೋಡು ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ.ವಾಮನ್ ರಾವ್ ಬೇಕಲ್, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸಮ್ಮೇಳನ ಸರ್ವಾಧ್ಯಕ್ಷಡಾ.ಸಿ.ಸೋಮಶೇಖರ್, ಸಮ್ಮೇಳನ ಸಮಿತಿ ಅಧ್ಯಕ್ಷ ಡಾ.ಕೆ.ಎನ್ ವೆಂಕಟರಮಣ ಹೊಳ್ಳ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕರ್ನಾಟಕ ರಾಜ್ಯ ಸಂಚಾಲಕ ಪತ್ರಕರ್ತ ಜಯಾನಂದ ಪೆರಾಜೆ, ಕನ್ನಡ ಭವನದ ಸಂಚಾಲಕಿ ಸಂಧ್ಯಾರಾಣಿ, ಜಾನಪದ ಪರಿಷತ್ತಿನ ಡಾ.ಬಾಲಾಜಿ, ವಸಂತ ಕೆರೆಮನೆ, ಡಾ.ಸುರೇಶ್ ನೆಗಳಗುಳಿ, ಕಥಾಬಿಂದು ಪ್ರಕಾಶನದ ಪಿ.ವಿ.ಪ್ರದೀಪ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.


ವಿಶಾಲಾಕ್ಷ ಪುತ್ರಕಳ ಹಾಗೂ ರೇಖಾ ಸುದೇಶ್ ರಾವ್ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top