ಉಡುಪಿ: ಇಲ್ಲಿನ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ Wednesday Learning Series ಕಾರ್ಯಕ್ರಮಕ್ಕೆ ಬುಧವಾರ (ಆ. 5)ರಂದು ಕಾಲೇಜಿನ ಟಿ. ಮೋಹನದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್ ಸಭಾಂಗಣದಲ್ಲಿ ದೀಪ ಪ್ರಜ್ವಲನದ ಮೂಲಕ ಚಾಲನೆ ನೀಡಲಾಯಿತು.
ಮೊದಲ ಕಾರ್ಯಕ್ರಮದ ಅಂಗವಾಗಿ ಖ್ಯಾತ ಸಾಫ್ಟ್ ಸ್ಕಿಲ್ಸ್ ತರಬೇತುದಾರ ಚಂದನ್ ರಾವ್ ವಿಶೇಷ ಉಪನ್ಯಾಸ ನೀಡುತ್ತಾ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯೊಂದಿಗೆ ವ್ಯಕ್ತಿತ್ವ ವಿಕಸನ, ಸಂವಹನ ಕೌಶಲ್ಯ, ಆತ್ಮವಿಶ್ವಾಸ, ಸಮಯ ನಿರ್ವಹಣೆ, ಸಕಾರಾತ್ಮಕ ಮನೋಭಾವ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯವನ್ನು ಒತ್ತಿಹೇಳಿದರು. ಜೀವನದಲ್ಲಿ ಯಶಸ್ಸು ಸಾಧಿಸಲು ಪ್ರತಿದಿನದ ಸಣ್ಣ ಸಣ್ಣ ಸಕಾರಾತ್ಮಕ ಬದಲಾವಣೆಗಳೇ ಭವಿಷ್ಯದಲ್ಲಿ ಮಹತ್ತರ ಸಾಧನೆಗೆ ಭದ್ರ ಬುನಾದಿಯಾಗುತ್ತವೆ ಎಂದು ತಿಳಿಸಿದರು. ಅಲ್ಲದೆ, ವೃತ್ತಿ ಜೀವನದಲ್ಲಿ ಯಶಸ್ಸು ಸಾಧಿಸಲು ಅಗತ್ಯವಾದ ಕೌಶಲ್ಯಗಳು, ನಾಯಕತ್ವ ಗುಣಗಳು ಹಾಗೂ ನಿರಂತರ ಕಲಿಕೆಯ ಮಹತ್ವದ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ದೇವೀದಾಸ್ ಎಸ್. ನಾಯಕ್ ಉಪಸ್ಥಿತರಿದ್ದರು
ತೃತೀಯ ಬಿಸಿಎ ಬಿ
ವಿಭಾಗದ ಶ್ರೇಷ್ಟಾ ಪ್ರಾರ್ಥಿಸಿ, ಪ್ರಥಮ ಬಿಸಿಎ ಬಿ ವಿಭಾಗದ ಅವಧೂತ್ ಅತಿಥಿಗಳನ್ನು ಹಾಗೂ ಸಭಿಕರನ್ನು ಸ್ವಾಗತಿಸಿದರು. ಪ್ರಥಮ ಬಿಬಿಎ ವಿಭಾಗದ ನವೀನ್ ಸಂಪನ್ಮೂಲ ವ್ಯಕ್ತಿಯನ್ನು
ಪರಿಚಯಿಸಿ, ದ್ವಿತೀಯ ಬಿಸಿಎ ಎ ವಿಭಾಗದ ಕುಶಿ ಆರ್ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


