ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ. 2 ರ ಮಧ್ಯ ಪದವು ಕೊಡಿಪಾಡಿ ಪರಿಶಿಷ್ಟ ಪಂಗಡ ಕಾಲೋನಿಯ ಆವರಣ ಗೋಡೆಯ ಮುಂದುವರಿದ ಕಾಮಗಾರಿ ಹಾಗೂ ಗೇಟ್ ಅಳವಡಿಕೆಗೆ ಸುಮಾರು ₹18 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಈ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಇಂದು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಪರಿಶಿಷ್ಟ ಪಂಗಡ ಕಾಲೋನಿಯ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿರುವ ಈ ಕಾಮಗಾರಿಯಿಂದ ಸ್ಥಳೀಯ ನಿವಾಸಿಗಳಿಗೆ ಸುರಕ್ಷಿತ ಹಾಗೂ ಉತ್ತಮ ಸೌಲಭ್ಯ ಒದಗಲಿದೆ.
ಈ ಸಂದರ್ಭದಲ್ಲಿ ನಿಕಟ ಪೂರ್ವ ಮನಪಾ ಸದಸ್ಯೆ ಶ್ವೇತಾ ಪೂಜಾರಿ, ಬೂತ್ ಅಧ್ಯಕ್ಷೆ ಪದ್ಮಾವತಿ ಕೊಡಿಪಾಡಿ, ಬೂತ್ ಸದಸ್ಯರಾದ ಅನಿಲ್, ಶಿವ, ಶೇಖರ್, ರಘುನಾಥ್, ಸಂಜೀವಿನಿ, ಲೀಲಾ, ಇಂದಿರ ಪುಟ್ಟ, ಲಲಿತಾ, ವಸಂತಿ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


