ಮಂಗಳೂರಿನಲ್ಲಿ ಆಗಸ್ಟ್ 5ರಂದು 'ವ್ಯಾಸ ಜಯಂತಿ' ವಿಶೇಷ ಉಪನ್ಯಾಸ ಕಾರ್ಯಕ್ರಮ

Upayuktha
0

 



ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್ (ನೋಂದಾಯಿತ) ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಮಂಗಳೂರಿನ ಕುದ್ರೋಳಿಯಲ್ಲಿರುವ ನಾರಾಯಣ ಗುರು ಕಾಲೇಜಿನ ಸಹಯೋಗದೊಂದಿಗೆ 'ವ್ಯಾಸ ಜಯಂತಿ' ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


ಈ ಕಾರ್ಯಕ್ರಮವು ಆಗಸ್ಟ್ 5, 2026ರ ಬುಧವಾರದಂದು ಮಧ್ಯಾಹ್ನ 2.00 ಗಂಟೆಗೆ ಮಂಗಳೂರಿನ ಕುದ್ರೋಳಿಯ ನಾರಾಯಣ ಗುರು ಕಾಲೇಜಿನ 'ದಾಮೋದರ ಆರ್. ಸುವರ್ಣ ಸಭಾಂಗಣ'ದಲ್ಲಿ ನಡೆಯಲಿದೆ.


ಮಂಗಳೂರಿನ ಮಿಲಾಗ್ರಿಸ್ ಕಾಲೇಜಿನ ಉಪನ್ಯಾಸಕಿ ಮಮತಾ ಅವರು ವ್ಯಾಸ ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾಯಣ ಗುರು ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಶೆಟ್ಟಿ ವಹಿಸಲಿದ್ದಾರೆ.


ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷೆ ವೀಣಾ ಟಿ. ಶೆಟ್ಟಿ ಹಾಗೂ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಕಿಶೋರ್ ಎಸ್. ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.


ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ನಾರಾಯಣ ಗುರು ಕಾಲೇಜಿನ ಆಡಳಿತ ಮಂಡಳಿ ಕೋರಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top