NEP 11 ಮತ್ತು 12ನೇ ತರಗತಿ ರಾಜ್ಯಶಾಸ್ತ್ರ ಪಠ್ಯಪುಸ್ತಕ ಸಮಿತಿ ಅಧ್ಯಕ್ಷರಾಗಿ ಪ್ರೊ. ಸಂದೀಪ್ ಶಾಸ್ತ್ರಿ ನೇಮಕ

Upayuktha
0

 



ಬೆಂಗಳೂರು: ನಿಟ್ಟೆ (ಪರಿಗಣಿತ ವಿಶ್ವವಿದ್ಯಾಲಯ) ಬೆಂಗಳೂರು ಕ್ಯಾಂಪಸ್‌ನ ಉಪಾಧ್ಯಕ್ಷ, ಶಿಕ್ಷಣ ತಜ್ಞ ಪ್ರೊ. ಸಂದೀಪ್ ಶಾಸ್ತ್ರಿ ಅವರಿಗೆ ರಾಷ್ಟ್ರೀಯ ಮಟ್ಟದ ಮಹತ್ವದ ಶೈಕ್ಷಣಿಕ ಜವಾಬ್ದಾರಿ ಲಭಿಸಿದೆ. ಕೇಂದ್ರ ಸರ್ಕಾರವು 11 ಮತ್ತು 12ನೇ ತರಗತಿಯ ರಾಜ್ಯಶಾಸ್ತ್ರ (Political Science) ವಿಷಯದ ನೂತನ ಪಠ್ಯಪುಸ್ತಕ ರಚನಾ ಸಮಿತಿಯ ಅಧ್ಯಕ್ಷರನ್ನಾಗಿ (Chair / Team Lead) ಪ್ರೊ. ಸಂದೀಪ್ ಶಾಸ್ತ್ರಿ ಅವರನ್ನು ನೇಮಕಗೊಳಿಸಿದೆ.


ರಾಷ್ಟ್ರೀಯ ಶಿಕ್ಷಣ ನೀತಿ (NEP) ಯ ಹೊಸ ಆಶಯಗಳು ಮತ್ತು ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿ ಸಮಗ್ರ ಹಾಗೂ ಆಧುನಿಕ ಮಾದರಿಯ ಪಠ್ಯಪುಸ್ತಕಗಳನ್ನು ಸಿದ್ಧಪಡಿಸುವ ಹೊಣೆಗಾರಿಕೆಯನ್ನು ಈ ಸಮಿತಿಗೆ ವಹಿಸಲಾಗಿದೆ.


ದೇಶದ ಶಾಲಾ ಶಿಕ್ಷಣದ ಪಠ್ಯಕ್ರಮವನ್ನು ಪುನಾರಚಿಸುವ ಉನ್ನತ ಮಟ್ಟದ ಸಮಿತಿಗೆ ಕನ್ನಡಿಗರೊಬ್ಬರು ನಾಯಕತ್ವ ವಹಿಸುತ್ತಿರುವುದು ಕರ್ನಾಟಕಕ್ಕೆ ಹಾಗೂ ನಿಟ್ಟೆ ಸಂಸ್ಥೆಗೆ ಸಂದ ದೊಡ್ಡ ಗೌರವವಾಗಿದೆ.


ರಾಜ್ಯಶಾಸ್ತ್ರ ಮತ್ತು ಶೈಕ್ಷಣಿಕ ಸಂಶೋಧನಾ ಕ್ಷೇತ್ರದಲ್ಲಿ ದಶಕಗಳ ಅಪಾರ ಅನುಭವ ಹೊಂದಿರುವ ಪ್ರೊ. ಶಾಸ್ತ್ರಿ ಅವರ ಮಾರ್ಗದರ್ಶನದಲ್ಲಿ ಮೂಡಿಬರುವ ಪಠ್ಯಪುಸ್ತಕಗಳು, ದೇಶದ ಶಾಲಾ ಶಿಕ್ಷಣದ ಗುಣಮಟ್ಟವನ್ನು ಉನ್ನತೀಕರಿಸಲು ನೆರವಾಗಲಿವೆ. ನೂತನ ಶಿಕ್ಷಣ ನೀತಿಯಂತೆ ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಚಿಂತನೆ, ಪ್ರಜಾಸತ್ತಾತ್ಮಕ ಮೌಲ್ಯಗಳು ಹಾಗೂ ವಿಷಯದ ಆಳವಾದ ಪರಿಕಲ್ಪನೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಈ ಪಠ್ಯಪುಸ್ತಕ ರಚನೆ ಕಾರ್ಯನಿರ್ವಹಿಸಲಿದೆ.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top