ಶ್ರೀನಿವಾಸ ಫಾರ್ಮಸಿ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿ ಸಮಾವೇಶ

Upayuktha
0

ಮಂಗಳೂರು: ನೂತನ ವಿದ್ಯಾರ್ಥಿ ಸಮಾವೇಶವು ಮಂಗಳೂರಿನ ವಳಚ್ಚಿನಲ್ಲಿರುವ ಶ್ರೀನಿವಾಸ ಫಾರ್ಮಸಿ ಕಾಲೇಜಿನ ಸಭಾಂಗಣದಲ್ಲಿ ಆಗಸ್ಟ್ 28, 2026ರಂದು ಜರುಗಿತು.


ಡಾ. ಎ. ಶ್ರೀನಿವಾಸ್ ರಾವ್, ಎ.ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಚಾನ್ಸೆಲರ್, ಶ್ರೀನಿವಾಸ್ ಯುನಿವರ್ಸಿಟಿ ಇವರು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ಹೆಚ್ಚು ಉಪಯುಕ್ತವಾದ ಔಷಧ ಸಂಶೋಧನೆಗಳ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಯನ್ನು ಮೂಡಿಸಬೇಕೆಂದು ಕರೆಯಿತ್ತರು. ಮುಖ್ಯ ಅತಿಥಿಯಾದ ಎ. ಮಿತ್ರಾ ಎಸ್.ರಾವ್, ಬೋರ್ಡ್ ಆಫ್ ಗವರ್ನರ್ಸ್, ಶ್ರೀನಿವಾಸ್ ಯುನಿವರ್ಸಿಟಿ ಮತ್ತು ಕಾರ್ಯದರ್ಶಿಗಳು ಎ. ಶಾಮರಾವ್ ಫೌಂಡೇಶನ್, ಮಂಗಳೂರು ಕಾಲೇಜಿಗೆ ಹೊಸದಾಗಿ ಪ್ರವೇಶ ಪಡೆದುಕೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಿ ಫಾರ್ಮಸಿ ವಿಭಾಗದಲ್ಲಿ ಕಲಿಯುವ ವಿದ್ಯಾರ್ಥಿಗಳು ಸಾಂಪ್ರದಾಯಿಕ ಔಷಧ ಗಿಡಮೂಲಿಕೆಗಳ  ಉಪಯುಕ್ತತೆಗಳನ್ನು ಸಂಶೋಧನಾತ್ಮಕವಾಗಿ ಬಳಸಿಕೊಳ್ಳಬೇಕೆಂದು ಹೇಳಿದರು.


ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎ.ಆರ್ ಶಬರಾಯರು ಅತಿಥಿಗಳನ್ನು ಸ್ವಾಗತಿಸಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಏಳಿಗೆಯನ್ನು ತರುವಲ್ಲಿ ಶಿಸ್ತು ಬದ್ಧ ಕಠಿಣ ಪರಿಶ್ರಮ ಹಾಗೂ ಶ್ರದ್ದೆಯಿಂದ ಕೂಡಿದ ಕಲಿಕೆಯನ್ನು ಅಳವಡಿಸಿಕೊಳ್ಳಬೇಕೆಂದು ಕರೆಯಿತ್ತರು. ಡಾ. ವೀರೇಶ್ ಕೆ.ಚೆಂಡೂರ, ಪ್ರೊಫೆಸರ್ ಇವರು ಡಿ.ಫಾರ್ಮ, ಬಿ.ಫಾರ್ಮ ಮತ್ತು ಫಾರ್ಮ ಡಿ. ಕೋರ್ಸಿನ ಬಗ್ಗೆ ಮಾಹಿತಿ ಹಾಗೂ ಪ್ರಾಮುಖ್ಯತೆಯನ್ನು ತಿಳಿಸಿದರು ನೂತನ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. 


ಪದ್ಮಾವತಿ ಪಿ.ಪ್ರಭು ಮತ್ತು ಅನ್ವಿತಾ ಡಿ ಇವರು ಕಾರ್ಯಕ್ರಮ ನಿರೂಪಿಸಿದರು. ಡಾ. ಕರುಣಾಕರ ಹೆಗ್ಡೆ, ಶ್ರೀನಿವಾಸ ಕಾಲೇಜ್ ಆಫ್ ಫಾರ್ಮಸಿ, ಇವರು ವಂದನಾರ್ಪಣೆಗೈದರು. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top