ಸುರತ್ಕಲ್: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಫಿಶರೀಶ್ ಚಿತ್ರಾಪುರ ಕುಳಾಯಿಯ ಎಲ್. ಕೆ. ಜಿ. ಮತ್ತು ಪ್ರಾಥಮಿಕ ತರಗತಿಯ ವಿದ್ಯಾರ್ಥಿಗಳಿಗೆ ಮಂಗಳೂರು ಕಂಕನಾಡಿಯ ಪರ್ಫೆಕ್ಟ್ ಎಸ್.ಬಿ.ಎಸ್ ಸೊಲ್ಯೂಷನ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಕಲಿಕಾ ಪರಿಕರ ಗಳನ್ನು ವಿತರಿಸಲಾಯಿತು.
ನ್ಯಾಯವಾದಿ ಬಾಲಕೃಷ್ಣ ಶೆಟ್ಟಿ ಮಾತನಾಡಿ ಪ್ರಾಥಮಿಕ ಶಿಕ್ಷಣ ವ್ಯವಸ್ಥೆ ಉತ್ತಮಗೊಳ್ಳಲು ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಸಾಮಾಜಿಕ ಸೇವಾ ಸಂಸ್ಥೆ ಹಾಗೂ ಉದ್ಯಮ ಕ್ಷೇತ್ರದವರ ಕೊಡುಗೆಗಳು ನಿರಂತರವಾಗಿ ಲಭ್ಯವಾಗಬೇಕು ಎಂದರು
ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ, ಜೊತೆ ಕಾರ್ಯದರ್ಶಿ ಕುಮಾರ್ ಬಂಗೇರ, ಸಾಮಾಜಿಕ ಸೇವಾ ಸಂಘಟಕ ಶ್ರೀನಿವಾಸ ಕುಳಾಯಿ ಶುಭ ಹಾರೈಸಿದರು.
ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿ, ಪವನ್ ಮೈರ್ಪಾಡಿ, ಭರತೇಶ್, ಅರುಣ್, ವಿಜಯ್, ಯಶ್ವಿತ್ ರಾಜ್, ವನಿತಾ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.jpeg)
