“ಫಿಲೋ ಕೆಸರ್ದ ಗೊಬ್ಬು” ಮಣ್ಣಿನೊಂದಿಗೆ ವಿದ್ಯಾರ್ಥಿಗಳ ಸಂಬಂಧ ಬೆಸೆಯುವ ವಿಶಿಷ್ಟ ಕಾರ್ಯಕ್ರಮ

Upayuktha
0

 


ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಮಾನವಿಕ ವಿಭಾಗದ ವತಿಯಿಂದ ವಿದ್ಯಾರ್ಥಿಗಳಲ್ಲಿ ಕೃಷಿ ಪರಂಪರೆ, ಮಣ್ಣಿನೊಂದಿಗೆ ನಂಟು ಹಾಗೂ ಸಮುದಾಯದ ಒಗ್ಗಟ್ಟಿನ ಮಹತ್ವವನ್ನು ಮೂಡಿಸುವ ಉದ್ದೇಶದಿಂದ ‘ಫಿಲೋ ಕೆಸರ್ದ ಗೊಬ್ಬು’ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಅಳಕೆಮಜಲಿನಲ್ಲಿ ಇತ್ತೀಚೆಗೆ ಆಯೋಜಿಸಲಾಯಿತು.


ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ.ಡಾ. ಆಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ಕೃಷಿ ಪರಂಪರೆಯನ್ನು ಉಳಿಸಿ ಬೆಳೆಸುವ ಅಗತ್ಯ, ಮಣ್ಣಿನೊಂದಿಗೆ ಮಾನವನಿಗಿರುವ ಅವಿನಾಭಾವ ಸಂಬಂಧ ಹಾಗೂ ಸಮುದಾಯದ ಬಾಂಧವ್ಯವನ್ನು ಗಟ್ಟಿಗೊಳಿಸುವಲ್ಲಿ ಇಂತಹ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು.


ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪ್ರಗತಿಪರ ಕೃಷಿಕ ಚಿದಾನಂದ ಗೌಡ ಮಾತನಾಡಿ, ವಿದ್ಯಾರ್ಥಿಗಳಿಗೆ ಕೃಷಿ ಜೀವನದ ಅನುಭವವನ್ನು ನೇರವಾಗಿ ಪರಿಚಯಿಸುವ ಈ ಕಾರ್ಯಕ್ರಮದ ಮಹತ್ವವನ್ನು ಶ್ಲಾಘಿಸಿ, ಕಾರ್ಯಕ್ರಮದ ಆಯೋಜಕರಿಗೆ ಶುಭ ಹಾರೈಸಿದರು.


ಮಾನವಿಕ ವಿಭಾಗದ ಬೋಧಕ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಕೆಸರಿನಲ್ಲಿ ಇಳಿದು ಕೃಷಿ ಚಟುವಟಿಕೆಗಳ ಅನುಭವವನ್ನು ಪಡೆದುಕೊಂಡಿದ್ದು, ಕಾರ್ಯಕ್ರಮವು ಮಣ್ಣಿನೊಂದಿಗೆ ಅವರ ನಂಟನ್ನು ಗಟ್ಟಿಗೊಳಿಸುವುದರ ಜೊತೆಗೆ ಕೃಷಿ ಸಂಸ್ಕೃತಿ ಮತ್ತು ಪರಂಪರೆಯ ಕುರಿತು ಅರಿವು ಮೂಡಿಸುವಲ್ಲಿ ಯಶಸ್ವಿಯಾಯಿತು.


ಮಾನವಿಕ ವಿಭಾಗದ ಡೀನ್ ಹಾಗೂ ಶೈಕ್ಷಣಿಕ ರಿಜಿಸ್ಟ್ರಾರ್ ಡಾ. ನಾರ್ಬರ್ಟ್ ಮಸ್ಕರೇನಸ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. 
ವೈಷ್ಣವಿ ಮತ್ತು ತಂಡ ಪ್ರಾರ್ಥಿಸಿ, ದ್ವಿತೀಯ ಬಿ.ಎ. ವಿದ್ಯಾರ್ಥಿ ಸಮರ್ಥ್ ಸ್ವಾಗತಿಸಿದರು. ತೃತೀಯ ಬಿ.ಎ. ವಿದ್ಯಾರ್ಥಿನಿ ಕೃತಿಕಾ ನಿರೂಪಿಸಿ, ದ್ವಿತೀಯ ಬಿ.ಎ. ವಿದ್ಯಾರ್ಥಿನಿ ಕೃತಿ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top