ಮುಂದಿನ ತಲೆಮಾರಿಗೆ ಪ್ರಕೃತಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಡಾ| ಜಿ. ಸಂತೋಷ್

Upayuktha
0

 


ಮಂಗಳೂರು: ನಮ್ಮ ಸುತ್ತಲಿನ ಪರಿಸರ ನಾವೇ ಹಾಳು ಮಾಡುತ್ತಿದ್ದೇವೆ. 2019ರಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನಡೆದ ಭೀಕರ ಪ್ರಕೃತಿ ದುರಂತಕ್ಕೆ ನಮ್ಮ ಸ್ವಾರ್ಥ ಮತ್ತು ಬೇಜವಾಬ್ದಾರಿತನವೇ ಮೂಲ ಕಾರಣ ಎಂದು ಜಿಲ್ಲಾ ನಗರಾಭಿವೃದ್ಧಿ ಸೆಲ್‌ನ ಯೋಜನಾ ನಿರ್ದೇಶಕ ಡಾ| ಜಿ. ಸಂತೋಷ್ ಕುಮಾರ್‌ ಹೇಳಿದರು.


ಮಂಗಳೂರು ಕಥೋಲಿಕ್ ಧರ್ಮಪ್ರಾಂತ್ಯದ ಪರಿಸರ ಆಯೋಗದ ನೇತೃತ್ವದಲ್ಲಿ ನಗರದ ಬೆಂದೂರ್ ಚರ್ಚ್‌ನ ಸಭಾಂಗಣದಲ್ಲಿ ಪರಿಸರ ಆಯೋಗದ ಸಂಚಾಲಕರು ಹಾಗೂ ಕಾರ್ಯದರ್ಶಿಗಳಿಗಾಗಿ ಆಯೋಜಿಸಲಾಗಿದ್ದ ವಿಶೇಷ ಪರಿಸರ ಮಾಹಿತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.


ನಮ್ಮ ದೇಶದಲ್ಲಿ ಪರಿಸರವನ್ನು ಉಳಿಸಿ, ಸಂರಕ್ಷಿಸುವ ಕಾರ್ಯ ಯುದ್ಧೋಪಾದಿಯಲ್ಲಿ ಆಗಬೇಕು. ಪ್ರಕೃತಿಯನ್ನು ಹಾಳು ಮಾಡಿದ್ದರಿಂದಲೇ ಇಂದು ನಾವು ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಪರಿಸರವನ್ನು ಕಾಪಾಡಿ, ಅದನ್ನು ನಮ್ಮ ಮುಂದಿನ ತಲೆಮಾರಿಗೆ ಸುರಕ್ಷಿತವಾಗಿ ನೀಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.


ದಕ್ಷಿಣ ಕನ್ನಡ ಜಿಲ್ಲಾ ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ| ರಾಜೇಂದ್ರ ಕಲ್ಬಾವಿ ಹಾಗೂ ಹಸಿರು ದಳದ ಪ್ರಾಜೆಕ್ಟ್ ಮ್ಯಾನೇಜರ್ ನಾಗರಾಜ್ ಬಜಾಲ್ ಅವರು ಪರಿಸರ ಸಂರಕ್ಷಣೆಯ ಪ್ರಾಯೋಗಿಕ ಮಾರ್ಗಗಳ ಕುರಿತು ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಮಂಗಳೂರು ಧರ್ಮಕ್ಷೇತ್ರದ ಪರಿಸರ ಆಯೋಗದ ಕಾರ್ಯದರ್ಶಿ ಲುವಿಸ್ ಜೆ. ಪಿಂಟೊ, ಪರಿಸರ ಆಯೋಗದ ಕಾರ್ಯಕಾರಿ ಸಮಿತಿ ಸದಸ್ಯ ವಂ| ಡಾ| ಮೈಕಲ್ ಸಾಂತುಮಾಯೋರ್, ಫಾದರ್ ಮುಲ್ಲರ್‌ ಸಂಸ್ಥೆಗಳ ನಿರ್ದೇಶಕ ವಂ| ಫಾ| ಫಾವುಸ್ಟಿನ್ ಲೋಬೊ, ಭ| ಪ್ಲಾವಿಯ ವಿಲ್ಮಾ, ಸೆಲೆಸ್ತಿನ್ ಡಿಸೋಜ, ಕ್ಲೇಮಂಟ್ ಪಿಂಟೊ, ಫ್ರಾನ್ಸಿಸ್ ಮಿನೇಜಸ್ ಬಾಲ್ಕುಟಜೆ, ಜೀತ್ ಮಿಲನ್ ರೋಚ್, ಚಾರ್ಲ್ಸ್ ಪಾಯ್ಸ್ ಉಪಸ್ಥಿತರಿದ್ದರು.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top