ಮಂಗಳೂರು: ಎಸ್ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕಲ್ಯಾಣ ಮಂಡಳಿಯ ವತಿಯಿಂದ ನೂತನವಾಗಿ ಕಾಲೇಜಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸುವ ಸಲುವಾಗಿ “ನಮ್ಮ ಆರಂಭ” ಎಂಬ ಆಶಯದೊಂದಿಗೆ ಹೊಸ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ವಿದ್ಯಾರ್ಥಿ ಕಲ್ಯಾಣ ಮಾರ್ಗದರ್ಶಕರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಮೇಘನಾ ಅವರ ನೇತೃತ್ವದಲ್ಲಿ ನೂತನ ವಿದ್ಯಾರ್ಥಿಗಳಿಗಾಗಿ ವಿವಿಧ ಮನರಂಜನಾ ಚಟುವಟಿಕೆಗಳು ಹಾಗೂ ಸಂವಾದಾತ್ಮಕ ಆಟಗಳನ್ನು ಆಯೋಜಿಸಲಾಯಿತು. ಹಿರಿಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿದರು.
ದ್ವಿತೀಯ ಬಿಬಿಎ ವಿದ್ಯಾರ್ಥಿನಿ ಶಮಾ ನಿರೂಪಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಆಡಳಿತ ಮಂಡಳಿ, ಪ್ರಾಂಶುಪಾಲರು, ವಿಭಾಗಗಳ ಮುಖ್ಯಸ್ಥರು, ವಿದ್ಯಾರ್ಥಿ ಕಲ್ಯಾಣ ಮಾರ್ಗದರ್ಶಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ನಾಯಕರು, ಹಿರಿಯ ವಿದ್ಯಾರ್ಥಿಗಳು ಸೇರಿದಂತೆ ಎಲ್ಲರಿಗೂ ಕೃತಜ್ಞತೆ ಸಲ್ಲಿಸಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


