ಎಸ್.ಡಿ.ಎಂ ಕಾಲೇಜು ಉಜಿರೆ : ಅರಿವಿನ ದೀವಿಗೆ 'ಪಶ್ಚಿಮ ಘಟ್ಟಗಳ ಜೀವ ವೈವಿಧ್ಯ' ವಿಶೇಷ ಉಪನ್ಯಾಸ

Upayuktha
0

ಜೀವ ವೈವಿಧ್ಯತೆಯ ರಕ್ಷಣೆ ನಮ್ಮೆಲ್ಲರ ಹೊಣೆ: ಡಾ. ಅವಿನಾಶ್ 



ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕನ್ನಡ ಹಾಗೂ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿದ್ದ ದಿ.ಡಾ. ಬಿ ಯಶೋವರ್ಮ ಸ್ಮರಣಾರ್ಥ ಹೇಮಾವತಿ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಅರಿವಿನ ದೀವಿಗೆ 'ಪಶ್ಚಿಮ ಘಟ್ಟಗಳ ಜೀವ ವೈವಿಧ್ಯ' ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ನಡೆಯಿತು. 


ಕಾರ್ಯಕ್ರಮದಲ್ಲಿ ಮೂಡಿಗೆರೆಯ ಕೀಟ ಶಾಸ್ತ್ರಜ್ಞ ಡಾ. ಅವಿನಾಶ್ ಪಶ್ಚಿಮ ಘಟ್ಟಗಳ ಜೀವ ವೈವಿಧ್ಯದ ಕುರಿತು ವಿಶೇಷ ಉಪನ್ಯಾಸ ನೀಡಿ,  ಪ್ರಸ್ತುತ ದಿನಗಳಲ್ಲಿ ಪ್ರಕೃತಿಯಲ್ಲಿನ ಜೀವವೈವಿಧ್ಯ ನಶಿಸುತ್ತಿದೆ. ಪ್ರಕೃತಿ ಉಳಿದರೆ ಮಾತ್ರ ಮಾನವನ ಬದುಕು ಸುರಕ್ಷಿತವಾಗಿರಲು ಸಾಧ್ಯ. ಅರಣ್ಯ ನಾಶ, ಹವಾಮಾನ ಬದಲಾವಣೆ, ಮಾಲಿನ್ಯ ಹಾಗೂ ಮನುಷ್ಯನ ಅತಿಯಾದ ಸ್ವಾರ್ಥದಿಂದ ಅನೇಕ ಜೀವಸಂಕುಲಗಳು ಅಳಿವಿನಂಚಿಗೆ ತಲುಪುತ್ತಿವೆ. ಇದನ್ನು ತಡೆಯಲು ಪರಿಸರ ಸ್ನೇಹಿ ಜೀವನಶೈಲಿ  ಅಳವಡಿಸಿಕೊಳ್ಳುವುದು ಹಾಗೂ ಅರಣ್ಯದಲ್ಲಿನ ವನ್ಯಜೀವಿಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.


ವಿದ್ಯಾರ್ಥಿಗಳಲ್ಲಿ ಕುತೂಹಲ ಮತ್ತು ಆಸಕ್ತಿ ಇದ್ದರೆ ಪ್ರಕೃತಿಯೇ ಪಾಠ ಶಾಲೆ. ವಿಶ್ವದ ಪ್ರಮುಖ ಜೀವವೈವಿಧ್ಯ ಹಾಟ್‌ಸ್ಪಾಟ್‌ಗಳಲ್ಲಿ ಪಶ್ಚಿಮ ಘಟ್ಟ ಕೂಡ ಒಂದಾಗಿದೆ. ಇದು ಸಾವಿರಾರು ಅಪರೂಪದ ಸಸ್ಯ, ಪ್ರಾಣಿ, ಪಕ್ಷಿ ಹಾಗೂ ಕೀಟ ಪ್ರಭೇದಗಳಿಗೆ ಆಶ್ರಯ ತಾಣವಾಗಿದೆ. ಮನುಷ್ಯ ತನ್ನ ಉಪಯೋಗ ಮತ್ತು ಪರಿಮಿತಿಗೆ ಬರದ ಜೀವಿಗಳನ್ನು ಪರಿಸರಕ್ಕೂ ಉಪಯೋಗ ಇಲ್ಲ ಎಂದು ಭಾವಿಸುತ್ತಾನೆ. ಆದರೆ ಪರಿಸರದ ಸಮತೋಲನ ಕಾಪಾಡುವಲ್ಲಿ ಪ್ರತಿಯೊಂದು ಜೀವಿಯದ್ದೂ ಕೂಡ ತನ್ನದೇ ಆದ ಪಾತ್ರವಿದ್ದು, ಕೀಟಗಳೂ ಸಹ ಪರಾಗಸ್ಪರ್ಶ, ಮಣ್ಣಿನ ಫಲವತ್ತತೆ ಹಾಗೂ ಆಹಾರ ಸರಪಳಿಯನ್ನು ಸಮತೋಲನದಲ್ಲಿಡುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ ಎಂದು ವಿವರಿಸಿದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಐಟಿ ಹಾಗೂ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ ಮಾತನಾಡಿ ತಮ್ಮ ತೀರ್ಥರೂಪರಾದ ಬಿ. ಯಶೋವರ್ಮ ಅವರ ದೂರದೃಷ್ಟಿ ಚಿಂತನೆಯ ಮಾದರಿಯಾಗಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳಲ್ಲಿ ಜಾರಿ ತಂದ ವಿಶೇಷ ಯೋಜನೆಗಳನ್ನು  ನೆನಪಿಸಿಕೊಂಡರು. ಕರೋನಾ ಸಂದರ್ಭದ ಬಳಿಕ ಪ್ರಚುರ ಪಡೆದ ಆನ್ಲೈನ್ ಪರೀಕ್ಷೆ, ತರಗತಿಗಳನ್ನು ತಂದೆಯವರು 2010ರ ಸಂದರ್ಭದಲ್ಲೇ ಕಾಲೇಜಿಗೆ ಪರಿಚಯಿಸಿದ್ದರು. ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ವಿಶೇಷ ಆಸಕ್ತಿ ವಹಿಸಿದ್ದರು. ಇಂದು ಕೃತಕ ಬುದ್ಧಿಮತ್ತೆಯಂತ ತಂತ್ರಜ್ಞಾನಗಳು ಹೆಚ್ಚುತ್ತಿದೆ. ಪ್ರಸ್ತುತ ವಿದ್ಯಮಾನಗಳು ಹಾಗು ತಂತ್ರಜ್ಞಾನಗಳಿಂದ ಹಿಂದೆ ಉಳಿಯದೇ ಬದಲಾವಣೆಯೊಂದಿಗೆ ಹೆಜ್ಜೆ ಹಾಕಬೇಕು ಎಂದರು. 


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ. ಮಾತನಾಡಿ, ಯಶೋವರ್ಮ ಅವರ ದೂರದೃಷ್ಟಿತ್ವ, ಶಿಕ್ಷಣದ ಮೇಲಿನ ಬದ್ಧತೆ ಹಾಗೂ ವಿದ್ಯಾರ್ಥಿ - ಕೇಂದ್ರಿತ ಚಿಂತನೆಗಳು ಎಸ್.ಡಿ.ಎಂ ಕಾಲೇಜಿಗೆ ಹೊಸ ರೂಪ ನೀಡಿವೆ. ಗುಣಮಟ್ಟದ ಶಿಕ್ಷಣ, ಕೌಶಲಾಭಿವೃದ್ಧಿ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಿದ್ದ ಅವರು ವಿದ್ಯಾರ್ಥಿಗಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು ಎಂದು ಸ್ಮರಿಸಿದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸೋನಿಯಾ ಯಶೋವರ್ಮ, ಡಾ. ಬಿ. ಯಶೋವರ್ಮರವರ ಸ್ಮರಣಾರ್ಥದಲ್ಲಿ ರಾಜ್ಯದ ನಾನ ಸಂಪನ್ಮೂಲ ವ್ಯಕ್ತಿಗಳನ್ನು ಕಾಲೇಜಿಗೆ ಕರೆಸಿ ಉಪನ್ಯಾಸ ಮಾಲೆಯನ್ನು ನಿರಂತರವಾಗಿ ನಡೆಸಿ ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯ ಹೆಚ್ಚಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. 



ಕಾರ್ಯಕ್ರಮದಲ್ಲಿ ರಕ್ಷಾ ಪೂರನ್ ವರ್ಮ, ಕಾಲೇಜಿನ ನಿಕಟ ಪೂರ್ವ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ, ಉಪ ಪ್ರಾಚಾರ್ಯೆ ನಂದ ಕುಮಾರಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ ಪಿ ಶ್ರೀನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ. ಗಣೇಶ್ ನಾಯಕ್ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. 


ಕಾಲೇಜಿನ ಕಲಾ ನಿಕಾಯದ ಡೀನ್ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಬೋಜಮ್ಮ ಕೆ ಎನ್. ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ವಿದ್ಯಾರ್ಥಿನಿ ಕವನ ನಿರೂಪಿಸಿ, ಸಸ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಅಭಿಲಾಷ್ ವಂದಿಸಿದರು. ಉಪನ್ಯಾಸಕ ಡಾ. ನಾಗಣ್ಣ ಕಾರ್ಯಕ್ರಮ ಸಂಯೋಜಿಸಿದರು. ಡಾ. ಹಳೆಮನೆ ರಾಜಶೇಖರ್ ಸಹಕರಿಸಿದರು.


"ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಲ್ಲಿ ಪಠ್ಯದ ಜೊತೆಗೆ ಮೌಲ್ಯಯುತ ಶಿಕ್ಷಣವನ್ನು ನೀಡುತ್ತಿರುವ ಮಾದರಿ ಸಂಸ್ಥೆ. ವಿದ್ಯಾರ್ಥಿಗಳ ಶಿಸ್ತು, ಅಧ್ಯಾಪಕರ ಮಾರ್ಗದರ್ಶನ, ಬೃಹತ್ ಗ್ರಂಥಾಲಯದಂತ ಮೂಲಭೂತ ವ್ಯವಸ್ಥೆಗಳು ಎಲ್ಲವೂ ವಿದ್ಯಾರ್ಥಿಗಳ ಯಶಸ್ವಿಗೆ ಪೂರಕ. ಡಾ. ಬಿ. ಯಶೋವರ್ಮರವರ ಸ್ಮರಣಾರ್ಥ ನಡೆಸುವ ಅರಿವಿನ ದೀವಿಗೆಯಂತ ಕಾರ್ಯಕ್ರಮ ಹೊಸ ವಿಚಾರ ಕ್ರಾಂತಿಗೆ ಅಡಿಪಾಯ. ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಮತ್ತು ವಿಜ್ಞಾನದ ವೈಚಾರಿಕ ಪ್ರಜ್ಞೆ ಜಾಗೃತಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ." 

ಡಾ. ಅವಿನಾಶ್ 

ಕೀಟ ತಜ್ಞರು, ಮೂಡಿಗೆರೆ


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top