ಪುತ್ತೂರು: ನಿರಂತರ ಅಭ್ಯಾಸದೊಂದಿಗೆ ಪ್ರತಿಯೊಬ್ಬ ವಿದ್ಯಾರ್ಥಿಯು ಈಗಿನಿಂದಲೇ ಕಲಿಕೆಯ ಮೂಲಕ ಗುರಿಯತ್ತ ಸಾಗಲು ತಯಾರಾಗಬೇಕು. ಆಧುನಿಕ ಯುಗದಲ್ಲಿ ಹಲವಾರು ರೀತಿಯ ಕಂಪ್ಯೂಟರ್ ಅಪ್ಲಿಕೇಶನ್ಗಳು ಇದ್ದು ವಿದ್ಯಾರ್ಥಿಗಳು ಅವುಗಳಲ್ಲಿಯೇ ಸತತ ಪರಿಶ್ರಮವಿದ್ದರೆೆ ಯಶಸ್ಸನ್ನು ಪಡೆಯಲು ಸಾಧ್ಯ. ವಿದ್ಯಾರ್ಥಿಗಳ ಕಲಿಕೆಗೆ ಹಲವಾರು ರೀತಿಯ ಅವಕಾಶಗಳಿವೆ. ಇವೆಲ್ಲದಕ್ಕೂ ನಿರಂತರ ಪ್ರಯತ್ನ ಬಹಳ ಮುಖ್ಯವಾಗುತ್ತದೆ ಎಂದು ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ಇಲ್ಲಿನ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್‌ನ ಉಪನ್ಯಾಸಕ ಅಜಯ್ ಶಾಸ್ತ್ರಿ ಸಿ.ಜಿ ಹೇಳಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಇಲ್ಲಿನ ಗಣಕ ಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿಯ ಜಂಟಿ ಆಶ್ರಯದಲ್ಲಿ ನಡೆದ ಐಟಿ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜು ಪ್ರಾಂಶುಪಾಲ ಪ್ರೊ.ಶ್ರೀಕೃಷ್ಣ ಗಣರಾಜ್ ಭಟ್ ಮಾತನಾಡಿ ಕೇವಲ ತರಗತಿಯ ಕಲಿಕೆ ಮಾತ್ರ ಸಾಲದು. ಅಗತ್ಯವಿರುವ ನಿರ್ದಿಷ್ಟ ಕ್ಷೇತ್ರಗಳಲ್ಲಿ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ 2026-27ನೇ ಶೈಕ್ಷಣಿಕ ವರ್ಷದ ಐಟಿ ಕ್ಲಬ್‌ನ ಕಾರ್ಯ ಚಟುವಟಿಗಳನ್ನು ಪ್ರಸ್ತುತಪಡಿಸಲಾಯಿತು. ವೇದಿಕೆಯಲ್ಲಿ ಐಟಿ ಕ್ಲಬ್‌ನ ಸಂಯೋಜಕಿ ಮತ್ತು ಗಣಕ ಶಾಸ್ತ್ರ ವಿಭಾಗದ ಉಪನ್ಯಾಸಕಿ ಹೇಮ ಶುಭಾಷಿಣಿ ಮತ್ತು ಸಹ ಸಂಯೋಜಕ ಧನಂಜಯ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಜಯಂತ್ ಸುಧನ್ವ ಸ್ವಾಗತಿಸಿ, ಕಾರ್ತಿಕ್ ಶೆಟ್ಟಿ ವಂದಿಸಿ, ಕೆ.ದೀಪಿಕಾ ಪ್ರಭು ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


