ಮನರಂಜನಾ ಕ್ಷೇತ್ರದಲ್ಲಿ ಎಐ ಬಳಕೆ ಕುರಿತು ವಿಶೇಷ ಉಪನ್ಯಾಸ

Upayuktha
0

 



ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಬಿ.ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ವತಿಯಿಂದ "ಎಂಟರ್‌ಟೈನ್‌ಮೆಂಟ್ ಕಂಟೆಂಟ್ ಕ್ರಿಯೇಷನ್‌ನಲ್ಲಿ ಕೃತಕ ಬುದ್ಧಿಮತ್ತೆ (AI)" ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವು ಆಗಸ್ಟ್ 3ರಂದು ಎಸ್‌ಡಿಎಂ ಪಿಜಿ ಕೇಂದ್ರದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಝೀ5 ಸಂಸ್ಥೆಯ ಸೀನಿಯರ್‌ ಮ್ಯಾನೇಜರ್‌ (ಕಂಟೆಂಟ್‌), ಸನಲ್ ನಾಯರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮನರಂಜನಾ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಹೆಚ್ಚುತ್ತಿರುವ ಬಳಕೆ, ಕಂಟೆಂಟ್ ನಿರ್ಮಾಣದ ವಿವಿಧ ಹಂತಗಳಲ್ಲಿ ಎಐನ ಪಾತ್ರ ಹಾಗೂ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿನ ಹೊಸ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕೃತಕ ಬುದ್ಧಿಮತ್ತೆಯನ್ನು ಸೃಜನಾತ್ಮಕವಾಗಿ ಮತ್ತು ಜವಾಬ್ದಾರಿಯುತವಾಗಿ ಬಳಸುವ ಅಗತ್ಯವನ್ನು ಒತ್ತಿ ಹೇಳಿದರು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಸಂವಾದದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು. ಮಾಧ್ಯಮ ಮತ್ತು ಮನರಂಜನಾ ಕ್ಷೇತ್ರದಲ್ಲಿ ಎಐಯ ಭವಿಷ್ಯದ ಸಾಧ್ಯತೆಗಳ ಕುರಿತು ಸಂಪನ್ಮೂಲ ವ್ಯಕ್ತಿ, ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಎಸ್‌ಡಿಎಂ ಬಿವೋಕ್‌ ಡಿಜಿಟಲ್‌ ಮೀಡಿಯಾ ಫಿಲ್ಮ್‌ ಮೇಕಿಂಗ್‌ ವಿಭಾಗದ ಮುಖ್ಯಸ್ಥ ಮಾಧವ ಹೊಳ್ಳ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top