ಉಡುಪಿ: ವಿಶ್ವ ಹಿಂದೂ ಪರಿಷತ್ ಅಂತರಾರಾಷ್ಟ್ರೀಯ ಅಧ್ಯಕ್ಷರಾದ ಡಾ. ಆಲೋಕ್ ಕುಮಾರ್ ಅವರು ಶುಕ್ರವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಪರ್ಯಾಯ ಶ್ರೀ ಶೀರೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ದರ್ಶನ ಪಡೆದರು.
ಶ್ರೀಕೃಷ್ಣನ ದರ್ಶನ ಪಡೆದ ಬಳಿಕ, ಪರ್ಯಾಯ ಶ್ರೀಪಾದರನ್ನು ಭೇಟಿಯಾದ ಆಲೋಕ್ ಕುಮಾರ್ ಅವರಿಗೆ ಶ್ರೀಗಳು ಫಲ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.
ಈ ಶುಭ ಸಂದರ್ಭದಲ್ಲಿ ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ, ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್, ಉಡುಪಿ ಜಿಲ್ಲಾ ವಿಎಚ್‌ಪಿ ಕಾರ್ಯಾಧ್ಯಕ್ಷ ಸುನಿಲ್ ಕೆ. ಆರ್., ಜಿಲ್ಲಾ ಅಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ, ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ಬಜರಂಗದಳ ಉಡುಪಿ ಜಿಲ್ಲಾ ಸಂಯೋಜಕ ಚೇತನ್ ಪೆರಲ್ಕೆ ಹಾಗೂ ಬಿಜೆಪಿ ಉಡುಪಿ ಜಿಲ್ಲಾ ವಕ್ತಾರ ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು.

