ಪುತ್ತೂರು : ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಆಯೋಜಿಸಲಾದ ಜಿಲ್ಲಾಮಟ್ಟದ 'ಪ್ರತಿಭಾ - 2026' ಕಾರ್ಯಕ್ರಮವು ಆಗಸ್ಟ್ 6 ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪುತ್ತೂರಿನ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಸಿ ಆಗಮಿಸಲಿದ್ದು, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಸ್ರಾದೊ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಶ್ರೀ ಪ್ರಕಾಶ್. ಬಿ ಹಾಗೂ ಕಾಲೇಜಿನ ರಕ್ಷಕ- ಶಿಕ್ಷಕ ಸಂಘದ ಉಪಾಧ್ಯಕ್ಷ
ಆಂಥೋನಿ ಒಲಿವೇರಾ ಉಪಸ್ಥಿತರಿರುತ್ತಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕ ರೆ.ಫಾ. ಡಾ| ಜಾನ್ ಬ್ಯಾಪ್ಟಿಸ್ಟ್ ಸಲ್ಡಾನ್ಹಾ ವಹಿಸಲಿದ್ದಾರೆ.
ಆಂಥೋನಿ ಒಲಿವೇರಾ ಉಪಸ್ಥಿತರಿರುತ್ತಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕ ರೆ.ಫಾ. ಡಾ| ಜಾನ್ ಬ್ಯಾಪ್ಟಿಸ್ಟ್ ಸಲ್ಡಾನ್ಹಾ ವಹಿಸಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಯಕ್ಷಗಾನ ಕಲಾವಿದರಾದ ಶುಭಾ ಅಡಿಗ
ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.