ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ಕೇವಲ ಅಂಕಗಳು ಮಾತ್ರ ಮುಖ್ಯವಲ್ಲ. ವಿದ್ಯಾಭ್ಯಾಸದ ಜೊತೆಗೆ ಸಂವಹನ ಹಾಗು ಇತರೆ ಕೌಶಲ್ಯಗಳನ್ನು ಕರಗತ ಮಾಡಿಕೊಂಡಾಗ ಯಶಸ್ಸು ಸಾಧ್ಯ ಎಂದು ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯದ ವಿಶೇಷ ಅಧಿಕಾರಿ ಮತ್ತು ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮನಮೋಹನ ಎಂ ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಟ್ರೈನಿಂಗ್ ಆ್ಯಂಡ್ ಪ್ಲೇಸ್‌ಮೆಂಟ್ ಹಾಗೂ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಮುಂಬೈನ ಎಂ.ಆರ್.ಪೈ ಫೌಂಡೇಶನ್ ಮತ್ತು ಫೋರಂ ಆಫ್ ಫ್ರೀ ಎಂಟರ್‌ಪ್ರೈಸ್ ಸಂಸ್ಥೆ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಎರಡು ದಿನದ ನಾಯಕತ್ವ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ಮುಂಬೈನ ಎಂ.ಆರ್.ಪೈ ಫೌಂಡೇಶನ್ ಮತ್ತು ಫೋರಂ ಆಫ್ ಫ್ರೀ ಎಂಟರ್‌ಪ್ರೈಸ್‌ನ ಸಂಪನ್ಮೂಲ ವ್ಯಕ್ತಿಗಳಾದ ಮುಂಬೈನ ಎಂಪವರ್ ಗ್ರಾಫ್‌ನ ಸಂಸ್ಥಾಪಕಿ ಹಾಗೂ ಜೀವನ ಮತ್ತು ಉದ್ಯಮಶೀಲತೆಯ ತರಬೇತುದಾರರಾದ ಕ್ಲಾರಿಸ್ಸಾ ಜಥನ್ನಾ, ಮುಂಬೈನ ಕಾರ್ಪೋರೇಟ್ ವೃತ್ತಿಪರ ತರಬೇತುದಾರ ಸುಧೀರ್ ಪೈ ಹಾಗೂ ಗಣಕಶಾಸ್ತ್ರ ವಿಭಾಗದ ಉಪನ್ಯಾಸ ಸೂರ್ಯನಾರಾಯಣ ಭಟ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಾಣಿಜ್ಯ ವಿಭಾಗದ ಉಪನ್ಯಾಸಕಿ ವಿದ್ಯಾ ಎನ್ ಸ್ವಾಗತಿಸಿ, ಗಣಕಯಂತ್ರ ವಿಭಾಗದ ಉಪನ್ಯಾಸಕ ಸೂರ್ಯನಾರಾಯಣ ವಂದಿಸಿ, ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕಿ ಲಕ್ಷ್ಮಿ ಎಸ್ ಭಟ್ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

