ವಿದ್ಯಾರ್ಥಿ ಶಕ್ತಿ ರಾಷ್ಟ್ರೀಯ ಶಕ್ತಿಯಾಗಬೇಕು - ಡಾ. ಸಿ.ಟಿ ರವಿ
ಪುತ್ತೂರು: ಭವಿಷ್ಯದಲ್ಲಿ ವಿದ್ಯಾರ್ಥಿಗಳು ತಾವು ಆಯ್ಕೆ ಮಾಡಿಕೊಂಡ ಕ್ಷೇತ್ರದಲ್ಲಿ ಉತ್ತಮ ಕಾರ್ಯನಿರ್ವಹಿಸಿದಾಗ ನಮ್ಮ ರಾಷ್ಟ್ರದ ಪ್ರಗತಿಯು ಉತ್ತಮವಾಗಿರುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಸಿಗುವ ಸಮಯವನ್ನು ವ್ಯರ್ಥ ಮಾಡದೆ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ನಾವು ಮಾಡುವ ಸಾಧನೆಯಿಂದ ಇತರರಿಗೆ ಪ್ರೇರಣೆ ದೊರಕಿದಾಗ ಅದು ಸಾರ್ಥಕ ಸಾಧನೆ ಎಂದೆನಿಸಿಕೊಳ್ಳುತ್ತದೆ. ನಮ್ಮ ಜೀವನವು ಯಶಸ್ಸಿನೊಂದಿಗೆ ಸಾರ್ಥಕತೆಯನ್ನು ಹೊಂದಬೇಕು. ನಮ್ಮ ಬಾಳಿಗೆ ನಾವೇ ಶಿಲ್ಪಿಗಳಾಗಿ ದೇಶದ ಪ್ರಗತಿಯ ನೇತೃತ್ವ ವಹಿಸಿಕೊಳ್ಳುವ ಜೆನ್-ಝಿಗಳು ನೀವಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಸಿ.ಟಿ ರವಿ ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇದರ ಐಕ್ಯೂಎಸಿ ಸಹಯೋಗದಲ್ಲಿ ನಡೆದ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿನ ವಿದ್ಯಾರ್ಥಿ ಶಕ್ತಿ ಸಂಘಟಿತವಾದಗ ರಾಷ್ಟ್ರವನ್ನು ಉತ್ತಮವಾಗಿ ಮುನ್ನಡೆಸಲು ಸಾಧ್ಯ. ಸಾಧನೆಗಳು ಸಮಾಜಕ್ಕೆ ಸಹಕಾರಿಯಾದಾಗ ಅದು ಸಾಮಾಜಿಕ ಮನ್ನಣೆ ಗಳಿಸುತ್ತದೆ. ಮಾನವನಿಗೆ ವಿದ್ಯೆಯೊಂದಿಗೆ ಸಾಮನ್ಯ ಜ್ಞಾನವು ಮುಖ್ಯ.ಇವೆಲ್ಲವನ್ನು ಹೊಂದಿ ದೇಶವನ್ನು ಸಂಘಟಿತವಾಗಿ ಮುನ್ನಡೆಸುವ ಧ್ಯೇಯ ವಿದ್ಯಾರ್ಥಿಗಳಲ್ಲಿ ಮೂಡಬೇಕು ಎಂದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಕೃಷ್ಣ ಶೆಟ್ಟಿ ಕಡಬ ಅಧ್ಯಕ್ಷೀಯ ನುಡಿಗಳನ್ನಾಡುತ್ತಾ, ವಿವೇಕಾನಂದ ವಿದ್ಯಾಸಂಸ್ಥೆಯು ಶಿಕ್ಷಣದ ಜೊತೆಗೆ ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸುತ್ತಾ ಬಂದಿದೆ. ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ರೂಪಿಸಿಕೊಂಡು ಬೆಳೆದಾಗ ಮಾತ್ರ ರಾಷ್ಟ್ರ ನಿರ್ಮಾಣ ಕಾರ್ಯ ಸಾಧ್ಯ. ರಾಷ್ಟ್ರದ ವಿಚಾರ, ಚಿಂತನೆಗಳು ಬಂದಾಗ ಎಲ್ಲಾ ವಿದ್ಯಾರ್ಥಿಗಳು ಒಗ್ಗಟ್ಟಾಗಿ ಮುಂದೆ ಬರಬೇಕಾದದ್ದು ಮುಖ್ಯ ಎಂದು ಹೇಳಿದರು.
ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ, ಸಂಚಾಲಕ ಹಾಗೂ ನ್ಯಾಯವಾದಿ ಮುರಳಿಕೃಷ್ಣ ಕೆ ಎನ್, ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್, ಕಾಲೇಜಿನ ವಿಶೇಷ ಅಧಿಕಾರಿ (ಆಡಳಿತ) ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮನಮೋಹನ ಎಂ ಹಾಗೂ ವಿದ್ಯಾರ್ಥಿ ಸಂಘದ ಜೊತೆಕಾರ್ಯದರ್ಶಿ ತೃತೀಯ ಬಿಎಸ್‌ಸ್ಸಿ ವಿದ್ಯಾರ್ಥಿನಿ ಎ ವಿದ್ಯಾಲಕ್ಷ್ಮಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳೊಂದಿಗೆ ತರಗತಿ ಪ್ರತಿನಿಧಿಗಳು ಪ್ರಮಾಣವಚನವನ್ನು ಸ್ವೀಕರಿಸಿದರು.
ಕಾರ್ಯಕ್ರಮವನ್ನು ವಿದ್ಯಾರ್ಥಿ ಸಂಘದ ಅಧ್ಯಕ್ಷ ತೃತೀಯ ಬಿ.ಕಾಂ ವಿದ್ಯಾರ್ಥಿ ಪ್ರಣಮ್ ಸ್ವಾಗತಿಸಿ, ಕಾರ್ಯದರ್ಶಿ ತೃತೀಯ ಬಿ.ಸಿ.ಎ ವಿದ್ಯಾರ್ಥಿ ಶ್ರೇಯಸ್ ಕೆ.ಆರ್ ವಂದಿಸಿ, ತೃತೀಯ ಬಿ.ಎಸ್.ಸ್ಸಿ ವಿದ್ಯಾರ್ಥಿನಿ ಅವನಿ ಕೆ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

