ವಿವೇಕಾನಂದ ಪದವಿ ಕಾಲೇಜಿನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ

Upayuktha
0

              



ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಗ್ರಂಥಾಲಯ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿರುವ ಜಯರಾಮ ಪಿ. ಹಾಗು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಕಛೇರಿ ಸಹಾಯಕರಾಗಿ ಸೇವೆ ಸಲ್ಲಿಸುತ್ತಿರುವ ಎಸ್.ಸತ್ಯನಾರಾಯಣ ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.


ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯದ ಆಡಳಿತ ಮಂಡಳಿ, ಶಿಕ್ಷಕ ಮತ್ತು ಶಿಕ್ಷಕೇತರ ಸಂಘದ ಆಶ್ರಯದಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆ ವಹಿಸಿದ ಮಾತನಾಡಿದ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ.ಕೆ.ಎನ್, ವಿವೇಕಾನಂದ ಸಂಸ್ಥೆಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡು ಕೆಲಸ ಮಾಡಿದ ಇವರಿಬ್ಬರ ಕಾರ್ಯವೈಖರಿ ಸಂಸ್ಥೆ ಸದಾ ಸ್ಮರಿಸುತ್ತದೆ. ವಿದ್ಯಾರ್ಥಿಗಳೊಂದಿಗೆ ಬೆರೆತು ಕೆಲಸ ಮಾಡುವುದರಲ್ಲಿ ಇವರಿಬ್ಬರ ಕಾರ್ಯ ಶ್ಲಾಘನೀಯ. ನಿವೃತ್ತಿಯ ನಂತರದ ಜೀವನ ಉತ್ತಮ ಹವ್ಯಾಸಗಳೊಂದಿಗೆ ಹಸನಾಗಲಿ ಎಂದರು.


ಆಡಳಿತ ಮಂಡಳಿಯ ಸದಸ್ಯ ಜಗನ್ನಾಥ್, ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್, ಶಿಕ್ಷಕ ಸಂಘದ ಅಧ್ಯಕ್ಷ ಡಾ. ಸೌಮಿತ್ರ ಹಾಗೂ ಶಿಕ್ಷಕೇತರ ಸಂಘದ ಅಧ್ಯಕ್ಷ ಎನ್. ಮೋಹನ್ ಅವರು ನಿವೃತ್ತ ಜೀವನಕ್ಕೆ ಶುಭಹಾರೈಸಿದರು. 



ಈ ಸಂದರ್ಭದಲ್ಲಿ ನಿವೃತ್ತಿ ಹೊಂದುತ್ತಿರುವ ಗ್ರಂಥಾಲಯ ಪಾಲಕ ಜಯರಾಮ್ ಪಿ. ಹಾಗೂ ಕಚೇರಿ ಸಹಾಯಕ ಎಸ್. ಸತ್ಯನಾರಾಯಣ ಅವರನ್ನು ಸನ್ಮಾನಿಸಲಾಯಿತು.  


ಕಾರ್ಯಕ್ರಮವನ್ನು ಗಣಕತಂತ್ರ ವಿಭಾಗದ ಕಂಪ್ಯೂಟರ್ ಲ್ಯಾಬ್ ಸಹಾಯಕಿ ನಿರೀಕ್ಷಾ ಹೆಚ್. ಪ್ರಾರ್ಥಿಸಿ, ಶಿಕ್ಷಕೇತರ ಸಂಘದ ಸದಸ್ಯ ಶಿವರಾಮ್ ವಂದಿಸಿ, ಕಾಲೇಜಿನ ಪರೀಕ್ಷಾ ವಿಭಾಗದ ಸಹಾಯಕಿ ಅಕ್ಷತಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top