ಪುತ್ತೂರು: ಯಾವುದೇ ವೃತ್ತಿ ಮೇಲು ಅಥವಾ ಕೀಳು ಅಲ್ಲ. ನಿಷ್ಕಾಮ ಕರ್ಮದಿಂದ ಕಾರ್ಯವನ್ನು ಪೂರೈಸಿದಾಗ ಭಗವಂತ ಅದಕ್ಕೆ ತಕ್ಕ ಪ್ರತಿಫಲವನ್ನು ನೀಡುತ್ತಾನೆ. ಪ್ರತಿಫಲವನ್ನು ಅಪೇಕ್ಷಿಸದ ಬದುಕು ಪ್ರೀತಿ ಮತ್ತು ಗೌರವವನ್ನು ಪಡೆದುಕೊಳ್ಳುತ್ತದೆ ಎಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕಿ ವತ್ಸಲ ರಾಜ್ಞೆ ನುಡಿದರು.
ಅವರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸಂಸ್ಥೆಯಲ್ಲಿ ಸುಮಾರು 36 ವರ್ಷಗಳಿಂದ ಅಟೆಂಡರ್ ಆಗಿ ಕಾರ್ಯನಿರ್ವಹಿಸಿದ ಸತ್ಯನಾರಾಯಣ ಹಾಗೂ ಸುಮಾರು 25 ವರ್ಷ ವಿವೇಕಾನಂದ ಪಾಲಿಟೆಕ್ನಿಕ್ ವಿಭಾಗ ಹಾಗೂ ಐದು ವರ್ಷಗಳಿಂದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ಪ್ರಯೋಗಾಲಯದಲ್ಲಿ ಸಹಾಯಕರಾಗಿ ಸೇವೆ ಸಲ್ಲಿಸಿದ ಲೀಲಾವತಿ ಇವರಿಗೆ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ. ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಭಾಗಿಯಾಗಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

