ಅಡ್ಯನಡ್ಕ: ಅಡ್ಯನಡ್ಕ ಜನತಾ ಪ್ರೌಢಶಾಲೆಯ 2026-27ನೇ ಶೈಕ್ಷಣಿಕ ವರ್ಷದ ಮೊದಲನೇ ರೂಪಣಾತ್ಮಕ ಮೌಲ್ಯಮಾಪನ ಅವಧಿಯ ಪೋಷಕರ ಸಭೆ ಇತ್ತೀಚೆಗೆ ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಭವನದಲ್ಲಿ ನಡೆಯಿತು.
ಜನತಾ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಅಡ್ಯನಡ್ಕ ಎಜುಕೇಶನಲ್ ಸೊಸೈಟಿ(ರಿ), ಅಡ್ಯನಡ್ಕ ಇದರ ಅಧ್ಯಕ್ಷರಾದ ಗೋವಿಂದ ಪ್ರಕಾಶ್ ಸಾಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ, ಆಡಳಿತಾಧಿಕಾರಿಯವರಾದ ರಮೇಶ್ ಎಂ. ಬಾಯಾರು ಮಾತನಾಡಿದರು. ಪೋಷಕರು ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಕೋಶಾಧಿಕಾರಿಯವರಾದ ಕೇಶವ ಭಟ್ ಚವರ್ಕಾಡು, ಪ್ರೌಢಶಾಲಾ ಉಸ್ತುವಾರಿ ಗೋವಿಂದರಾಯ ಶೆಣೈ ಅಡ್ಯನಡ್ಕ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್ ಅವರು ಸ್ವಾಗತಿಸಿ, ಪ್ರಸ್ತಾವನೆಗೈದರು. ವಿದ್ಯಾರ್ಥಿಗಳು ಸ್ಫೂರ್ತಿಗೀತೆ ಹಾಡಿದರು. ಕನ್ನಡ ಶಿಕ್ಷಕರಾದ ಶಿವಕುಮಾರ್ ಸಾಯ ಅವರು ಕಾರ್ಯಕ್ರಮ ನಿರೂಪಿಸಿ, ಗಣಿತ ಶಿಕ್ಷಕಿ ಗೀತಾ ಎಚ್ ಶೆಟ್ಟಿ ಅವರು ವಂದಿಸಿದರು. 'ಜೈ ಜನತಾ' ಘೋಷಣೆ ಹಾಗೂ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

