ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ, ರೋಟರಿ ಇಂಟರ್‌ನ್ಯಾಶನಲ್ ಜಿಲ್ಲೆ 3181, ದ.ಕ.ಜಿಲ್ಲಾ ಮಾಜಿ ಸೈನಿಕರ ಸಂಘ, ಮಂಥನ ಓಜಸ್ ಟ್ರಸ್ಟ್ ಮತ್ತು ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ "ಧನ್ಯತಾ" ಹಿರಿಯ ನಾಗರಿಕರ ದಿನಾಚರಣೆ ಆ.30ರಂದು ಬೆಳಗ್ಗೆ 9ಕ್ಕೆ ರೆಡ್‌ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿದೆ.
ರೋಟರಿ ಜಿಲ್ಲೆ 3181 ಗವರ್ನರ್ ಸತೀಶ್ ಬೋಳಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಸಂಸದ ಕ್ಯಾ.ಬ್ರಿಜೇಶ್ ಚೌಟ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಕರ್ನಲ್ ಎ.ಕೆ.ಜಯಚಂದ್ರನ್, ಮಂಥನ ಓಜಸ್ ಟ್ರಸ್ಟ್ ನ ಅಧ್ಯಕ್ಷೆ ಮಂಗಳಾ ನಂದಕುಮಾರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ರೋಟರಿ ಸಂಧ್ಯಾ ಸುರಕ್ಷಾ ಯೋಜನೆಯ ಚೇರ್ಮನ್ ಅನಿಲ್ ರಾವ್ ಉಪಸ್ಥಿತರಿರುವರು.
ಇದೇ ಸಂದರ್ಭ ಹಿರಿಯ ನಾಗರಿಕರಿಗಾಗಿ ಯೇನೆಪೊಯ ಆಯುರ್ವೇದ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಸಹಯೋಗದಲ್ಲಿ ಉಚಿತ ದಂತ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

