ವಿದ್ಯಾರ್ಥಿಗಳಿಗೆ ಸಾವಯವ ಕೃಷಿ ಮತ್ತು ಮಾದಕ ದ್ರವ್ಯ ವ್ಯಸನದ ಕುರಿತು ಜಾಗೃತಿ ಕಾರ್ಯಕ್ರಮ

Upayuktha
0


ಉಜಿರೆ: ಸರಕಾರಿ ಪ್ರೌಢಶಾಲೆ, ಹಳೆಪೇಟೆ, ಉಜಿರೆ ಇಲ್ಲಿ ವಿದ್ಯಾರ್ಥಿಗಳಿಗೆ ಸಾವಯವ ಕೃಷಿಯ ಕುರಿತು ಮಾಹಿತಿ ಹಾಗೂ ಮಾದಕ ದ್ರವ್ಯ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.ಲಯನ್ಸ್ ಕ್ಲಬ್, ಬೆಳ್ತಂಗಡಿ ಘಟಕ, ಲಿಯೊ ಕ್ಲಬ್, ಬೆಳ್ತಂಗಡಿ ಘಟಕ ಹಾಗೂ ಶ್ರೀ ರಾಮಚಂದ್ರಾಪುರ ಮಠದ ಉಜಿರೆ ಹವ್ಯಕ ವಲಯ ಇವರ ಸಂಯುಕ್ತ ಆಶ್ರಯದಲ್ಲಿ  ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ,ಉಜಿರೆಯ ಪ್ರಗತಿಪರ ಕೃಷಿಕರು ಹಾಗೂ ನಿವೃತ್ತ ಭೂಸೇನಾ ಅಧಿಕಾರಿಗಳಾದ ಶ್ರೀ ಗೋಪಾಲಕೃಷ್ಣ ಭಟ್, ಕಾಂಚೋಡು ಅವರು ವಿದ್ಯಾರ್ಥಿಗಳಿಗೆ ಡ್ರಾಗನ್ ಹಣ್ಣಿನ ಸಾವಯವ ಕೃಷಿಯ ಕುರಿತು ಸಮಗ್ರ ಮಾಹಿತಿ ನೀಡಿದರು. ಡ್ರಾಗನ್ ಹಣ್ಣಿನ ಕೃಷಿ ವಿಧಾನ, ಅದರ ಪ್ರಯೋಜನಗಳು ಹಾಗೂ ಆಧುನಿಕ ಕೃಷಿಯಲ್ಲಿ ಸಾವಯವ ಪದ್ಧತಿಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು. ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸಮಯೋಚಿತವಾಗಿ ಅವರು ಉತ್ತರಿಸಿದರು.ಇದೇ ಸಂದರ್ಭದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಡ್ರಾಗನ್ ಹಣ್ಣನ್ನು ವಿತರಿಸಲಾಯಿತು. 


ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ಲಯನ್ ಶ್ರೀ ರಘುರಾಮ ಶೆಟ್ಟಿ ಅವರು ಮಾದಕ ದ್ರವ್ಯ ವ್ಯಸನದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಉದಾಹರಣೆ ಸಹಿತ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ಯುವಜನತೆ ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯಕರ ಮತ್ತು ಸಾರ್ಥಕ ಜೀವನವನ್ನು ರೂಪಿಸಿಕೊಳ್ಳುವಂತೆ ಕರೆ ನೀಡಿದರು. ವಿದ್ಯಾರ್ಥಿಗಳನ್ನು ಹಾದಿ ತಪ್ಪಿಸುವ ದುರ್ವ್ಯಸನಗಳ ಬಗ್ಗೆ ನಾವು ಜಾಗೃತವಾಗಿರಬೇಕೆಂದು ಅವರು ಎಚ್ಚರಿಕೆಯನ್ನು ನೀಡಿದರು. 


ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಮುಖ್ಯ ಶಿಕ್ಷಕರಾದ ಶ್ರೀಮತಿ ವೀಣಾ ಶ್ಯಾನಭಾಗ ಇವರು ಇಂತಹ ಉಪಯುಕ್ತ ಕಾರ್ಯಕ್ರಮವನ್ನು ತಮ್ಮ ಶಾಲೆಯಲ್ಲಿ ಆಯೋಜಿಸಿದ್ದನ್ನು ಶ್ಲಾಘಿಸಿ ಎಲ್ಲರಿಗೂ ಸ್ವಾಗತವನ್ನು ಕೋರಿದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಕೋಶಾಧಿಕಾರಿ ಶ್ರೀ ನಾಣ್ಯಪ್ಪ ನಾಯ್ಕ್, ಗುರಿಕಾರರಾದ ಶ್ರೀ ಕೇಶವ ಭಟ್ ಪದ್ಯಾಣ, ರೊಟೇರಿಯನ್ ಶ್ರೀ ವಿದ್ಯಾಕುಮಾರ್ ಕಾಂಚೋಡು ಹಾಗೂ ಲಿಯೋ ಕ್ಲಬ್ ಅಧ್ಯಕ್ಷೆಯಾದ ಕುಮಾರಿ ಅಭಿಜ್ಞಾ ಉಪಸ್ಥಿತರಿದ್ದರು. ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಹಶಿಕ್ಷಕಿ ಶ್ರೀಮತಿ ಸತ್ಯವತಿ ಅವರು ನಿರ್ವಹಿಸಿದ ಕಾರ್ಯಕ್ರಮದ ಕೊನೆಗೆ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಅಶೋಕ ಎಸ್ ವಿ ಇವರು ಧನ್ಯವಾದ ಸಮರ್ಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top