ಭೈರಪ್ಪನವರ ಸಾಹಿತ್ಯದಲ್ಲಿ ವೈಚಾರಿಕತೆ, ವೈಜ್ಞಾನಿಕ ಮನೋಭಾವ ಮತ್ತು ವಾಸ್ತವದರ್ಶನ: ಪ್ರೊ. ಅನಿಲಾ ಕಾಮತ್

Upayuktha
0



ಮಂಗಳೂರು: ಕನ್ನಡದ ಖ್ಯಾತ ಕಾದಂಬರಿಕಾರ ಎಸ್. ಎಲ್. ಭೈರಪ್ಪನವರ ಸಾಹಿತ್ಯದಲ್ಲಿ ವೈಚಾರಿಕತೆ, ವೈಜ್ಞಾನಿಕ ಮನೋಭಾವ, ತಾರ್ಕಿಕ ಚಿಂತನೆ ಹಾಗೂ ವಾಸ್ತವದರ್ಶನದ ಆಳವಾದ ಅಭಿವ್ಯಕ್ತಿ ಕಂಡುಬರುತ್ತದೆ ಎಂದು ಕೆನರಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಅನಿಲಾ ಕಾಮತ್ ಹೇಳಿದರು.


ಕೆನರಾ ಕಾಲೇಜು (ಸ್ವಾಯತ್ತ), ಮಂಗಳೂರಿನ ಕನ್ನಡ ವಿಭಾಗದ ವತಿಯಿಂದ ಭೈರಪ್ಪನವರ ಜನ್ಮದಿನದ ಅಂಗವಾಗಿ ಆಗಸ್ಟ್ 20ರಂದು ರತ್ನ ಎಸ್. ಶೆಣೈ ಮೆಮೋರಿಯಲ್ ಹಾಲ್‌ನಲ್ಲಿ ಆಯೋಜಿಸಿದ್ದ ‘ಭೈರಪ್ಪ ನಮನ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.


ಭೈರಪ್ಪನವರ ಕಾದಂಬರಿಗಳಲ್ಲಿನ ಸೂಕ್ಷ್ಮತೆ, ಅವರ ವಿದ್ವತ್ಪೂರ್ಣ ದೃಷ್ಟಿಕೋನ, ವೈಜ್ಞಾನಿಕ ಮನೋಭಾವ, ತಾರ್ಕಿಕ ಚಿಂತನೆ ಹಾಗೂ ವಾಸ್ತವಿಕ ನೋಟವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ಅವರು ಹೇಳಿದರು. ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯ. ಇತರರ ಜೀವನವನ್ನು ಅರ್ಥಮಾಡಿಕೊಳ್ಳುವ ಮೂಲಕ ನಮ್ಮದೇ ಜೀವನಕ್ಕೆ ಹೆಚ್ಚಿನ ಅರ್ಥವನ್ನು ಕಂಡುಕೊಳ್ಳಲು ಸಾಧ್ಯ ಎಂದು ಅವರು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ. ದೇಜಮ್ಮ ಎ. ಮಾತನಾಡಿ, ಭೈರಪ್ಪನವರ ಸಾಹಿತ್ಯದಲ್ಲಿರುವ ಪ್ರಮುಖ ವಿಚಾರಗಳನ್ನು ಉಲ್ಲೇಖಿಸಿ, ವಿದ್ಯಾರ್ಥಿಗಳು ಕೇವಲ ಸಾಹಿತ್ಯಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕೆ ಸೀಮಿತವಾಗದೆ ಸಾಹಿತ್ಯಾಸಕ್ತಿಯನ್ನು ಬೆಳೆಸಿಕೊಳ್ಳಬೇಕು. ಸಾಹಿತ್ಯದಲ್ಲಿ ಪ್ರತಿಪಾದಿತವಾಗಿರುವ ಮೌಲ್ಯಗಳು ಮತ್ತು ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.


ಈ ಸಂದರ್ಭದಲ್ಲಿ ವಿದ್ಯಾರ್ಥಿನಿ ಮನಿಷಾ ಅವರು ಎಸ್. ಎಲ್. ಭೈರಪ್ಪನವರ ಸಾಹಿತ್ಯ ಮತ್ತು ವ್ಯಕ್ತಿತ್ವದ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.


ಕನ್ನಡ ವಿಭಾಗದ ಮುಖ್ಯಸ್ಥರಾದ ವಾಣಿ ಯು. ಎಸ್. ಹಾಗೂ ಸಹಾಯಕ ಪ್ರಾಧ್ಯಾಪಕರಾದ ಪ್ರದೀಪ್ ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕೆನರಾ ಕಾಲೇಜಿನ ಗ್ರಂಥಪಾಲಕಿ ಶ್ರೀಮತಿ ಶ್ರುತಿ ಭಾಗವಹಿಸಿದ್ದರು.ಅನುಷಾ ಅಡಿಗ ಸ್ವಾಗತಿಸಿದರು. ದುರ್ಗಮ್ಮ ಕಾರ್ಯಕ್ರಮ ನಿರೂಪಿಸಿದರು. ನೂತನ್ ವಂದನಾರ್ಪಣೆ ಸಲ್ಲಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top