ವಿದ್ಯೆ ಅಜ್ಞಾನ ಹೋಗಲಾಡಿಸುವ ಉನ್ನತ ಶಕ್ತಿ: ಡಾ. ದಿವಾಕರ್ ಭಟ್

Upayuktha
0



ಮಂಗಳೂರು, ಆ. 12:
ಗ್ರಂಥಾಲಯ ಹೃದಯವಿದ್ದ ಹಾಗೆ. ವಿದ್ಯೆ ನಮ್ಮ ಅಜ್ಞಾನವನ್ನು ಹೋಗಲಾಡಿಸಲು ಇರುವ ಉನ್ನತ ಶಕ್ತಿಯಾಗಿದೆ ಎಂದು ಕಾರ್ಕಳದ ನಿಟ್ಟೆ ತಾಂತ್ರಿಕ ವಿಶ್ವವಿದ್ಯಾನಿಲಯದ ನಿವೃತ್ತ ಗ್ರಂಥಪಾಲಕ ಡಾ. ದಿವಾಕರ ಭಟ್ ಅವರು ಹೇಳಿದರು.


ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಆಂತರಿಕ ಗುಣಮಟ್ಟ ಖಾತ್ರಿಕೋಶದ ವತಿಯಿಂದ ಗ್ರಂಥಾಲಯ ಪಿತಾಮಹ ಡಾ. ಎಸ್. ಆರ್. ರಂಗನಾಥನ್ ಅವರ 134ನೇ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.


ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪುಸ್ತಕಗಳನ್ನು ಅಧ್ಯಯನ ಮಾಡುವ ಮೂಲಕ ಅವುಗಳ ಜ್ಞಾನದ ಪ್ರಯೋಜನ ಪಡೆದುಕೊಳ್ಳಬೇಕು. ಹಿಂದಿನ ಕಾಲದಲ್ಲಿ ಗ್ರಂಥಾಲಯಗಳನ್ನು ಹುಡುಕಿಕೊಂಡು ಹೋಗುವ ಪರಿಸ್ಥಿತಿ ಇತ್ತು. ಆದರೆ, ಇಂದು ತಾಂತ್ರಿಕ ಬೆಳವಣಿಗೆಯ ಕಾರಣದಿಂದಾಗಿ ಡಿಜಿಟಲ್ ಗ್ರಂಥಾಲಯ ಎಲ್ಲೆಡೆಯೂ ಲಭ್ಯವಿದೆ. ಅದನ್ನು ಸೂಕ್ತವಾಗಿ ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೊ. ಜಯವಂತ ನಾಯಕ್, ಜ್ಞಾನ ಪಡೆಯುವುದಕ್ಕಾಗಿಯೇ ಗ್ರಂಥಾಲಯಗಳಿರುತ್ತವೆ. ವಿದ್ಯಾರ್ಥಿಗಳು ಜ್ಞಾನ ಮತ್ತು ಕೌಶಲ್ಯ ವೃದ್ಧಿಸಿಕೊಳ್ಳುವುದು ಇಂದಿನ ಅಗತ್ಯಗಳಲ್ಲಿ ಒಂದಾಗಿದೆ. ಹಾಗಾಗಿ ಆ ನಿಟ್ಟಿನಲ್ಲಿ ಹೆಚ್ಚು ಗಮನ ನೀಡುವಂತೆ ಸಲಹೆ ನೀಡಿದರು.


ಗ್ರಂಥಪಾಲಕಿ ಡಾ. ವನಜಾ ಸ್ವಾಗತಿಸಿ ಪ್ರಾಸ್ಥಾವಿಕವಾಗಿ ಮಾತನಾಡಿದರು. ಇದೇ ವೇಳೆ ಐಕ್ಯುಎಸಿ ಸಂಯೋಜಕಡಾ. ಸಿದ್ದರಾಜು ಎಂ. ಎನ್., ಪೂರ್ವತನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಸೇರಿದಂತೆ ನಾನಾ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top