ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಿಎಎಸ್‌ಎಫ್ ಇಂಡಿಯಾ ಲಿಮಿಟೆಡ್ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾದ ಸಂತೋಷ್ ಪೈ ಇವರು ಧ್ವಜಾರೋಹಣ ನೆರವೇರಿಸಿದರು. ಅನಂತರ ಚೇತನಾ ಶಾಲಾ ಮಕ್ಕಳಿಂದ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯ ಅತಿಥಿಗಳು ಸ್ವಾಸ್ವಾತಂತ್ರ್ಯೋತ್ಸವದ ಮಹತ್ವವನ್ನು ವಿವರಿಸಿದರು.
ಶಾಲಾ ಶಿಕ್ಷಕಿ ಶ್ರೀಮತಿ ದೀಪಾ ಮೋಹನ್ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ಶ್ರೀಮತಿ ಸವಿತಾ ಹೆಚ್ ವಂದಿಸಿದರು. ಸೇವಾಭಾರತಿ ಸಂಸ್ಥೆಯ ಕಾರ್ಯದರ್ಶಿ ಹೆಚ್.ನಾಗರಾಜ ಭಟ್, ಶ್ರೀಮತಿ ಸುಪ್ರೀತಾ, ಸೇವಾಭಾರತಿ ಸಂಸ್ಥೆಯ ವಿಶ್ವಸ್ಥರು, ಸ್ವಯಂಸೇವಕರು, ಶಾಲಾಶಿಕ್ಷಕಿಯರು, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ವಿಶೇಷ ಮಕ್ಕಳಿಂದ ವೈವಿಧ್ಯಮಯ ದೇಶಭಕ್ತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು ಬಳಿಕ ಸಿಹಿತಿಂಡಿಯನ್ನು ಹಂಚಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

