ಚಿತ್ರ ಕುಟುಂಬಮ್ - 2026: ಮಂಜೇಶ್ವರದಲ್ಲಿ ಸಾಂಸ್ಕೃತಿಕ ಕಲಾ ವೈಭವ

Upayuktha
0


ಮಂಜೇಶ್ವರ: ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿಯೇಷನ್ (AKPA) ಕುಂಬಳೆ ಜೋನ್ ವತಿಯಿಂದ ಮಂಜೇಶ್ವರದ ಎ.ಕೆ. ಗಾರ್ಡನ್ಸ್‌ನಲ್ಲಿ 'ಮೆಟ್ರಿಕ್ಸ್ ಚಿತ್ರ ಕುಟುಂಬಮ್ - 2026' ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು. ನೂರಾರು ಕುಟುಂಬಗಳು ಭಾಗವಹಿಸಿದ್ದ ಈ ಸಮಾರಂಭದಲ್ಲಿ ವಿವಿಧ ಆಟೋಟ ಹಾಗೂ ಕ್ರೀಡಾ ಸ್ಪರ್ಧೆಗಳು ಜರುಗಿದವು.


ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ (ರಿ.) ಕಾಸರಗೋಡು ಸಂಸ್ಥೆಯ ವತಿಯಿಂದ 'ಸಾಂಸ್ಕೃತಿಕ ಕಲಾ ವೈಭವ ಹಾಗೂ ಕಲಾವಿದರ ಕಲರವ' ಮೂಡಿಬಂದಿತು. ಗುರುರಾಜ್ ಕಾಸರಗೋಡು ಅವರ ಸಂಯೋಜನೆ ಹಾಗೂ ನಿರೂಪಣೆಯಲ್ಲಿ ಮೂಡಿಬಂದ ಈ ಕಲಾ ಸಂಜೆ ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಯಿತು.


ಸಂಸ್ಥೆಯ ಪ್ರತಿಭಾವಂತ ಯುವ ಹಾಗೂ ಬಾಲ ಕಲಾವಿದರು ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನ ನೀಡುವ ಮೂಲಕ ಸಭಿಕರನ್ನು ಮಂತ್ರಮುಗ್ಧಗೊಳಿಸಿದರು. ಸಮಾರೋಪದಲ್ಲಿ, ಪ್ರದರ್ಶನ ನೀಡಿದ ಎಲ್ಲಾ ಕಲಾವಿದರಿಗೂ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top