ಬದುಕಿನಲ್ಲಿ ಸಾಧಿಸುವ ಛಲ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸೋಮಶೇಖರ ಶೆಟ್ಟಿ ಕಿವಿಮಾತು

Upayuktha
0


ಬೆಳ್ತಂಗಡಿ: "ವಿಶ್ವಸಂಸ್ಕೃತಿಯಲ್ಲಿ ಭಾರತ ಜಗದ್ಗುರುವಾಗಿದೆ. ವಿಶಿಷ್ಟವಾದ ಭಾರತೀಯ ಸಂಸ್ಕೃತಿಯಲ್ಲಿರುವ ಸಂಸ್ಕಾರ, ಆಚಾರ- ವಿಚಾರ, ರೀತಿ ನೀತಿಗಳನ್ನು ತಿಳಿದುಕೊಳ್ಳುವ ವೇದಿಕೆ ಈ ಸಾಹಿತ್ಯ ಸಂಭ್ರಮ. ಉಚಿತ ಹುಟ್ಟು ಮತ್ತು ಖಚಿತ ಸಾವಿನ ಮಧ್ಯೆ ನಮ್ಮ ಬದುಕು ಇದೆ. ಬೆಲೆಕಟ್ಟಲಾಗದ ಅಮೂಲ್ಯವಾದ ಈ ಬದುಕಿನಲ್ಲಿ ಏನನ್ನಾದರೂ ಸಾಧಿಸಿ ತೋರಿಸಬೇಕೆಂಬ ಛಲವಿರಬೇಕು" ಎಂದು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಗುರುಗಳಾದ ಸೋಮಶೇಖರ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.


ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ "ಸಾಹಿತ್ಯ ಸಂಭ್ರಮ" ಸಮಾರಂಭದಲ್ಲಿ ಉದ್ಘಾಟಕರಾಗಿ ಮಾತನಾಡುತ್ತಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿ.ವಿ. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ನಿವೃತ್ತ ಪ್ರಾಂಶುಪಾಲರಾದ ಚಂದ್ರಶೇಖರ್, ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಮೋಹನ ಗೌಡ, ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಅಜಿತ್ ಆರಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಪವಿತ್ರ ಇವರು ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ವಸಂತಿ ಪಿ. ಸ್ವಾಗತಿಸಿ, ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಶಿಲ್ಪಾಡಿ ಧನ್ಯವಾದವಿತ್ತರು.


ಉಪನ್ಯಾಸಕರುಗಳಾದ ಕುಮಾರಿ ನಯನ ಮತ್ತು ಕುಮಾರಿ ಶ್ರಾವ್ಯ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಸಿದ್ಧಗೊಳಿಸಿದ ಸಮಾರಂಭದ ವೇದಿಕೆ ತುಂಬಾ ಆಕರ್ಷಕವಾಗಿತ್ತು. ಸಮಾರಂಭದ ಯಶಸ್ಸಿನಲ್ಲಿ ಎಲ್ಲಾ ಉಪನ್ಯಾಸಕರು ಸಹಕರಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top