ಮಂಗಳೂರು: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ (ಓಬಿಸಿ) ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮ ಜಯಂತಿ ಕಾರ್ಯಕ್ರಮವನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಮಹೇಶ್ ಜೋಗಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಮಾರಂಭಕ್ಕೆ ಆಗಮಿಸಿದ್ದವರನ್ನು ಸ್ವಾಗತಿಸಿದರು.
ನಾರಾಯಣ ಗುರುಗಳ ಕೊಡುಗೆ ಸ್ಮರಣೆ:
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್, "ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವು ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ, ಮಂಗಳೂರಿನಲ್ಲಿ 'ನಾರಾಯಣ ಗುರು ವೃತ್ತ' ನಿರ್ಮಾಣ ಹಾಗೂ ಸರ್ಕಾರದ ವತಿಯಿಂದ ಜಯಂತಿ ಆಚರಣೆ ಜಾರಿಗೆ ತರುವ ಮೂಲಕ ಗುರುಗಳಿಗೆ ಸೂಕ್ತ ಗೌರವ ಸಲ್ಲಿಸಿದೆ" ಎಂದು ಸ್ಮರಿಸಿದರು.
ಮೂಡಾ (MUDA) ಮಾಜಿ ಅಧ್ಯಕ್ಷ ರವಿಶಂಕರ್ ಮಿಜಾರು ಅವರು ಗುರುಗಳ ಸಂದೇಶ ನೀಡಿ, "ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವವನ್ನು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮಾಜಿಕ ಸಮಾನತೆಗಾಗಿ ಶ್ರಮಿಸಿದ ಮಹಾನ್ ಸಂತ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು" ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್, ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಪ್ರಮುಖರಾದ ರಾಜಗೋಪಾಲ್ ರೈ, ನಾರಾಯಣ ಗಟ್ಟಿ, ಭಾಸ್ಕರ್‌ಚಂದ್ರ ಶೆಟ್ಟಿ, ರಾಮ ಅಮೀನ್ ಪಚ್ಚನಾಡಿ, ಮೋಹನರಾಜ್ ಕೆ.ಆರ್, ರಾಜೇಶ್ ಮಡಿವಾಳ, ಕಿರಣ್ ಕುಮಾರ್ ಕೋಡಿಕಲ್, ಮನೋಹರ್ ಶೆಟ್ಟಿ, ಓಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮೋನಪ್ಪ ದೇವಸ್ಯ, ಶಶಿದರ ಕಲ್ಮಂಜ ಸೇರಿದಂತೆ ವಿವಿಧ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ದೀಪಿಕಾ ಮನೋಜ್ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಅರುಣ್ ಶೇಟ್ 'ವಂದೇ ಮಾತರಂ' ಗೀತೆ ನುಡಿಸಿದರು. ಕೋಶಾಧಿಕಾರಿ ಸತೀಶ್ ಮರವೂರು ಕಾರ್ಯಕ್ರಮ ನಿರೂಪಿಸಿದರೆ, ಉಪಾಧ್ಯಕ್ಷ ವಸಂತ ಹೊಸಬೆಟ್ಟು ಧನ್ಯವಾದ ಸಮರ್ಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

