ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಂಭ್ರಮದ ‘ಆಟಿಡೊಂಜಿ ದಿನ’ ಆಚರಣೆ

Upayuktha
0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ವತಿಯಿಂದ ಇಂದು (ಆಗಸ್ಟ್ 13, 2026) ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ತುಳುನಾಡಿನ ಸಾಂಸ್ಕೃತಿಕ ಪರ್ವ ‘ಆಟಿಡೊಂಜಿ ದಿನ’ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.


ತುಳುನಾಡಿನ ಆಚರಣೆಗಳು ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಈ ವಿಶೇಷ ಕಾರ್ಯಕ್ರಮದ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ ಇಬ್ಬರು ಸಾಧಕಿಯರನ್ನು ಗೌರವಿಸಿ, ಸನ್ಮಾನಿಸಲಾಯಿತು. 


ಭಾರತೀಯ ಸೇನೆಯ ಸಿಆರ್‌ಪಿಎಫ್ (CRPF) 221ನೇ ಬೆಟಾಲಿಯನ್‌ನ ವಿ ಎಸ್ ವಿಭಾಗದಲ್ಲಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ ಕದ್ರಿಯ ನಿವಾಸಿ ಶ್ರೀಮತಿ ಅಹಲ್ಯಾ ಕುಲಾಲ್ ಹಾಗೂ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಶ್ರೀಮತಿ ಆಶಾ ನಾಗರಾಜ್ ಅವರನ್ನು ಮುಖ್ಯ ಅಭ್ಯಾಗತರು ಹಾಗೂ ಪಕ್ಷದ ಮುಖಂಡರು ಆತ್ಮೀಯವಾಗಿ ಸನ್ಮಾನಿಸಿದರು.


ಕಾರ್ಯಕ್ರಮದಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷರಾದ ಡಾ. ಮಂಜುಳಾ ಅನಿಲ್ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ ಹಾಗೂ ಯತೀಶ್ ಆರ್ವರ್ ಭಾಗವಹಿಸಿ ಶುಭ ಹಾರೈಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top