ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Upayuktha
0


ಮಂಗಳೂರು:
ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.


ಕಾರ್ಯಕ್ರಮದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆಯೊಂದಿಗೆ ಭಾರತಮಾತೆಗೆ ಗೌರವ ಸಲ್ಲಿಸಲಾಯಿತು. ಸ್ವಾತಂತ್ರ್ಯ ಹೋರಾಟದಲ್ಲಿ ತ್ಯಾಗ-ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಿ ಗೌರವ ನಮನ ಸಲ್ಲಿಸಲಾಯಿತು.


ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ದೇಶದ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವ ಹೊಣೆಗಾರಿಕೆ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಪ್ರತಿಯೊಬ್ಬ ನಾಗರಿಕನ ಪಾತ್ರದ ಕುರಿತು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಅಭಿವೃದ್ಧಿ ಮತ್ತು ಆತ್ಮನಿರ್ಭರತೆಯ ಪಥದಲ್ಲಿ ಮುನ್ನಡೆಯುತ್ತಿದ್ದು, ವಿಕಸಿತ ಭಾರತ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು.


ಈ ಸಂದರ್ಭದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರು ನಗರ ದಕ್ಷಿಣದ ಶಾಸಕರಾದ ಡಿ. ವೇದವ್ಯಾಸ್ ಕಾಮತ್, ವಿ. ಪ  ಸದಸ್ಯರಾದ ಕಿಶೋರ್ ಕುಮಾರ್, ಮಾಜಿ ವಿ ಪ ಸದಸ್ಯರಾದ ಮೋನಪ್ಪ ಭಂಡಾರಿ, ಪ್ರದಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಉಪಾಧ್ಯಕ್ಷೆ ಕವಿತಾ ಸನಿಲ್, ಪೂಜಾ ಪೈ, ಮಹಿಳಾಮೊರ್ಚಾ ಅಧ್ಯಕ್ಷೆ ಮಂಜುಳಾ ಅನಿಲ್ ರಾವ್, ಯುವಮೊರ್ಚಾ ಅಧ್ಯಕ್ಷ ನಂದನ್ ಮಲ್ಯ, ಪ್ರಮುಖರಾದ ನಿತಿನ್ ಕುಮಾರ್, ರವಿ ಶಂಕರ್ ಮಿಜಾರ್, ರಾಜ್ ಗೋಪಾಲ ರೈ, ಅರುಣ್ ಶೇಟ್, ನಾರಾಯಣ ಗಟ್ಟಿ, ರಮೇಶ್ ಹೆಗ್ಡೆ, ಸುಧೀರ್ ಶೆಟ್ಟಿ, ರಾಮ ಅಮೀನ್, ಸಂಜಯ ಪ್ರಭು, ಗುರುಚರಣ್, ಜಗದೀಶ ಶೆಟ್ಟಿ ಬೋಳೂರು, ಪ್ರಭಾ ಮಾಲಿನಿ, ರಾಜೇಂದ್ರ ಶೆಟ್ಟಿ, ಪ್ರಮೋದ್ ಪೂಜಾರಿ ಕೆರ್ವಾಶೆ, ಶಿವಪ್ರಸಾದ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top