ಮಂಗಳೂರು: ಮುಡಿಪು ಭಾರತಿ ವಿದ್ಯಾಸಂಸ್ಥೆಯಲ್ಲಿ ಪಿ.ವಿ. ಪ್ರದೀಪ್ ಕುಮಾರ್ ಸಾರತ್ಯದ ಕಥಾಬಿಂಧು ಸಾಹಿತ್ಯ ವೇದಿಕೆ ಮತ್ತು ಕಥಾಬಿಂಧು ಪ್ರಕಾಶನದ ನೇತೃತ್ವದಲ್ಲಿ ಇಂದು (ಆ.16) ನಡೆದ ವಿಶ್ವ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನ, ಧರ್ಮದರ್ಶಿ ಮಾಜಿ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಅಧ್ಯಕ್ಷತೆಯಲ್ಲಿ ವಹಿಸಿದರು.
ಈ ಸಂದರ್ಭದಲ್ಲಿ ಮಂಗಳೂರಿನ ಮೂಲವ್ಯಾಧಿ ಕ್ಷಾರ ಶಸ್ತ್ರ ಚಿಕಿತ್ಸಕ ಗಜಲ್ ಕವಿ ಕಣಚೂರಿನ ಆಯುರ್ವೇದ ಕಾಲೇಜಿನ ವೈದ್ಯಕೀಯ ಸಲಹೆಗಾರ ಡಾ ಸುರೇಶ ನೆಗಳಗುಳಿಯವರಿಗೆ ಸಾಹಿತ್ಯ ರತ್ನ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಧರ್ಮದರ್ಶಿ ಹರಿಕೃಷ್ಣ ಪುನಃರೂರು, ಕಥಾಬಿಂದು ಪಿ.ವಿ. ಪ್ರದೀಪ್ ಕುಮಾರ್, ಸುನಿತಾ ಪಿ ವಿ, ಡಾ. ಕೊಳಚಪ್ಪೆ ಗೋವಿಂದ ಭಟ್. ಹಿರಿಯ ಸಾಹಿತಿ ಕೆ. ವಿ ಲಕ್ಷ್ಮಣ ಮೂರ್ತಿ, ಸುಬ್ರಹ್ಮಣ್ಯ ಭಟ್ ಕೊಡಕ್ಕಲ್ ಮುಂತಾದವರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

