ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ವಾರ್ಷಿಕ ಮಹಾಸಭೆ ಮತ್ತು ಪ್ರೇರಣಾ ಕಾರ್ಯಾಗಾರ

Upayuktha
0


ಬ್ರಹ್ಮಾವರ :  ಭಾವನೆಗಳನ್ನು ಅರ್ಥ ಮಾಡಿಕೊಂಡು ಕಷ್ಟ ಸುಖ ಸಮಾನವಾಗಿ ಸ್ವೀಕರಿಸಿ ಬದುಕನ್ನು ಪ್ರೀತಿಸುವ ಗುಣ ಇದ್ದರೆ ನಮ್ಮ ಜೀವನವನ್ನು ಸಾರ್ಥಕ ಗೊಳಿಸಬಹುದು  ಎಂದು ನಿಟ್ಟೆ ಕೆಎಸ್ ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಪ್ರಾಧ್ಯಾಪಕರಾದ ಡಾ. ಸುಧೀರ್ ರಾಜ್ ಕೆ ಹೇಳಿದರು.

ಅವರು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ಜಯಂಟ್ಸ್ ಕೇರ್ ಫೌಂಡೇಶನ್ ವತಿಯಿಂದ ಸಿಟಿ ಸೆಂಟರ್ ನಲ್ಲಿ ನಡೆದ ಮಹಾಸಭೆ ಮತ್ತು ಪ್ರೇರಣಾದಾಯಕ ಕಾರ್ಯಗಾರದಲ್ಲಿ ಮಾತನಾಡಿದರು.


 ವಿಶಾಲವಾದ ಮನೋಭಾವ ಮತ್ತು ವಿಷಯದ ಸಮಗ್ರತೆ ಇದ್ದರೆ ಬದುಕಿನಲ್ಲಿ ಸಾರ್ಥಕತೆಗಳಿಸಲು ಸಾಧ್ಯ ಸಮಷ್ಟಿ ಭಾವ ಒಂದು ದೇಶ ಒಂದು ಕುಟುಂಬ ಮತ್ತು ಒಂದು ಭವಿಷ್ಯ ಈ ನಿಟ್ಟಿನಲ್ಲಿ ನಾವು ಯೋಚಿಸಬೇಕಾಗಿದೆ ಎಂದು ಹೇಳಿದವರು ವರ್ಷ ಪೂರ್ತಿ ಸಂತೋಷವಾಗಿರಲು ಮತ್ತೊಬ್ಬರಿಗೆ ಸಹಾಯ ಮಾಡಿದರೆ ಮಾತ್ರ ಸಾಧ್ಯ ಎಂದರು.


ಜಯಂಟ್ಸ್ ಸೆಂಟ್ರಲ್ ಕಮಿಟಿ ಮೆಂಬರ್ ದಿನಕರ್  ಕೆ ಅಮೀನ್ ಬ್ರಹ್ಮಾವರ ಘಟಕ ತನ್ನ ಅತ್ಯುತ್ತಮ ಸೇವಾ ಕಾರ್ಯ ದ ಮೂಲಕ ಬಹಳಷ್ಟು ಜನರ ಪ್ರೀತಿಯನ್ನು ಗಳಿಸಿದೆ ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವೆ ಅವರಿಂದ ನಡೆಯಲಿ ಎಂದು ಶುಭ ಹಾರೈಸಿದರು.


ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜಯಂಟ್ಸ್ ಗ್ರೂಪ್ ಬ್ರಹ್ಮಾವರದ ಅಧ್ಯಕ್ಷ ಅಣ್ಣಯ್ಯ ದಾಸ್ ವಹಿಸಿ ಸ್ವಾಗತಿಸಿದರು. 


ಯೂನಿಟ್ ಡೈರೆಕ್ಟರ್ ಸುಂದರ್ ಪೂಜಾರಿ ಮೂಡುಕುಕ್ಕುಡೆ ನೂತನ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿ ಶುಭ ಹಾರೈಸಿದರು. ಕಾರ್ಯದರ್ಶಿ  ಮಿಲ್ಟನ್ ಒಲಿವೇರಾ ವರದಿ ವಾಚಿಸಿದರು. ಈ ಸಂದರ್ಭದಲ್ಲಿ ಡಾ. ಸುಧೀರ್ ರಾಜ್ ಕೆ ಅವರನ್ನು ಸೇವಾರತ್ನ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. 

ಪೂರ್ವ ಫೆಡರೇಶನ್ ಅಧ್ಯಕ್ಷ ಮಧುಸೂದನ್ ಹೇರೂರು ಪ್ರಸ್ತಾವನೆಗೈದರು. ಜಯಂಟ್ಸ್ ಸದಸ್ಯರನ್ನು ಮತ್ತು ಇತರ ಘಟಕದ ಪದಾಧಿಕಾರಿಗಳನ್ನು ಗೌರವಿಸಲಾಯಿತು.


ಕಾರ್ಯಕ್ರಮದ ಮೊದಲು ಕಾರ್ತಿಕ್ ರಾಜ್ ಸಾಸ್ತಾನ  ಮತ್ತು ರೊನಾಲ್ಡ್ ಡಯಾಸ್ ಅವರಿಂದ ಸಂಗೀತ ಕಾರ್ಯಕ್ರಮ  ಅದೇ ರೀತಿ ಪ್ರತಿಭಾ ಸುರೇಶ್ ಮತ್ತು ಸುಧಾಕರ್ ನಾಯಕ್ ಅವರಿಂದ ಸದಸ್ಯರಿಗೆ ವಿವಿಧ ಕ್ರೀಡಾ ಚಟುವಟಿಕೆ ನಡೆಯಿತು. ಪೂರ್ವ ಅಧ್ಯಕ್ಷ ಶಿವರಾಮ ಶೆಟ್ಟಿ ಅವರು  ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಧನ ಸಹಾಯ ನೀಡಿದರು. ಮಿಲ್ಟನ್ ಒಲಿವೇರಾ ವಂದಿಸಿದರು. 


ನಿರ್ದೇಶಕರಾದ ಡೋರಿಸ್ ಡಿಸೋಜ ;ವಿವೇಕ ಕಾಮತ್ ; ಕಿಶೋರಿ ಶೆಟ್ಟಿ ಸಹಕರಿಸಿದರು ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ನಿರೂಪಣೆಗೈದ ಹಾಗೂ ವಿವಿಧ ಪ್ರಶಸ್ತಿಗಳನ್ನು ಪಡೆದ ರಾಘವೇಂದ್ರ ಕರ್ವಾಲು ರವರನ್ನು ಗುರುತಿಸಿ ಗೌರವಿಸಲಾಯಿತು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top