ಹದಿಹರೆಯದ ಮಕ್ಕಳಿಗೆ ಸಮಯ, ಪ್ರೀತಿ ನೀಡಿ; ಆಡಂಬರ ಬೇಡ: ಆಂಟನಿ ಟಿ.ಪಿ.

Upayuktha
0


ಬೆಳ್ತಂಗಡಿ : "ಹದಿಹರೆಯದ ವಿದ್ಯಾರ್ಥಿಗಳಿಗೆ ಸಮಯ ಮತ್ತು ಪ್ರೀತಿಯನ್ನು ನೀಡಿ ಅವರ ಅವಶ್ಯಕತೆಯನ್ನು ಈಡೇರಿಸಿ ಆದರೆ ಆಡಂಬರವನ್ನು ಕೊಡಬೇಡಿ.ಮಕ್ಕಳಿಗಾಗಿ ಆಸ್ತಿ ಮಾಡಬೇಡಿ. ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ." ಎಂದು ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಆಂಟನಿ ಟಿ.ಪಿ. ಇವರು ಪೋಷಕರಿಗೆ ಕರೆ ನೀಡಿದರು. 


ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪೋಷಕರ ಸಭೆಯನ್ನು ಉದ್ದೇಶಿಸಿ ಇವರು ಮಾತನಾಡಿದರು.


ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿ.ವಿ. ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಪೋಷಕರಿಗೆ ಮಾರ್ಗದರ್ಶನ ಮಾಡಿದರು. 


ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಶಿಲ್ಪಾ ಡಿ ಇವರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.


ಹಿರಿಯ ಉಪನ್ಯಾಸಕರಾದ ಶ್ರೀಮತಿ ವಸಂತಿ ಪಿ ಇವರು ಪೋಷಕರಿಗೆ ಕಿವಿ ಮಾತು ಹೇಳಿದರು. ಇತಿಹಾಸ ಉಪನ್ಯಾಸಕರಾದ ಶ್ರೀಮತಿ ಸವಿತಾ ಇವರು ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಆಂಗ್ಲ ಭಾಷಾ ಉಪನ್ಯಾಸಕರಾದ ಶ್ರಾವ್ಯ ಇವರು ಧನ್ಯವಾದವಿತ್ತರು. 


ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top