ಕುನಾಲ್ ಕಾಮ್ರಾ ಕಾಮಿಡಿ ಶೋ ರದ್ದತಿ ಆಗ್ರಹಿಸಿ ಪೊಲೀಸರಿಗೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಮನವಿ

Upayuktha
0



ಬೆಂಗಳೂರು: ಬೆಂಗಳೂರಿನ ವೈಟ್‌ಫೀಲ್ಡ್‌ನ URU Whitefield, ಪಟ್ಟಂದೂರು ಅಗ್ರಹಾರದಲ್ಲಿ ಆ.3ರಂದು ಆಯೋಜಿಸಲಾಗಿರುವ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರ ಕಾರ್ಯಕ್ರಮವನ್ನು ಕಾನೂನು ಮತ್ತು ಸುವ್ಯವಸ್ಥೆ, ಸಾರ್ವಜನಿಕ ಶಾಂತಿ ಹಾಗೂ ಧಾರ್ಮಿಕ ಸಾಮರಸ್ಯದ ಹಿತದೃಷ್ಟಿಯಿಂದ ರದ್ದುಗೊಳಿಸುವಂತೆ ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ, ಬೆಂಗಳೂರು ವತಿಯಿಂದ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.


ಮನವಿಯನ್ನು ಸಮಸ್ತ ಹಿಂದೂ ಸಂಘಟನೆಗಳ ಪರವಾಗಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕರ್ನಾಟಕ ರಾಜ್ಯ ವಕ್ತಾರ ಮೋಹನ ಗೌಡ, ಶ್ರೀರಾಮ ಸೇನೆಯ ಸುಂದರೇಶ್ ನರ್ಗಲ್, ಸುಬ್ರಹ್ಮಣ್ಯ, ನಾರಾಯಣ ಗೌಡ, ಭರತ್ ಕುಮಾರ್ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.


ಮನವಿಯಲ್ಲಿ, ಸಾರ್ವಜನಿಕವಾಗಿ ಲಭ್ಯವಿರುವ ಮಾಹಿತಿಯ ಪ್ರಕಾರ ಕುನಾಲ್ ಕಾಮ್ರಾ ಅವರ ಕೆಲವು ಕಾಮಿಡಿ ಕಾರ್ಯಕ್ರಮಗಳು ಹಾಗೂ ಸಾಮಾಜಿಕ ಮಾಧ್ಯಮದಲ್ಲಿನ ಕೆಲವು ಹೇಳಿಕೆಗಳು ಈ ಹಿಂದೆ ದೇಶದ ವಿವಿಧ ಭಾಗಗಳಲ್ಲಿ ವಿವಾದಗಳಿಗೆ ಕಾರಣವಾಗಿವೆ ಎಂದು ಉಲ್ಲೇಖಿಸಲಾಗಿದೆ. ಅವರ ವಿರುದ್ಧ ವಿವಿಧ ಸಂದರ್ಭಗಳಲ್ಲಿ ದೂರುಗಳು, ಕಾನೂನು ನೋಟಿಸ್‌ಗಳು ಹಾಗೂ ನ್ಯಾಯಾಂಗ ಪ್ರಕ್ರಿಯೆಗಳು ನಡೆದಿರುವುದಾಗಿ ವರದಿಯಾಗಿರುವುದನ್ನೂ ಗಮನಕ್ಕೆ ತರಲಾಗಿದೆ.


ಅದೇ ರೀತಿಯಲ್ಲಿ, 2021ರಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಅವರ ಕಾಮಿಡಿ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿತ್ತು ಎಂಬುದನ್ನೂ ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಸುಪ್ರೀಂ ಕೋರ್ಟ್ ಕುರಿತು ಅವರು ಮಾಡಿದ ಕೆಲವು ಸಾಮಾಜಿಕ ಮಾಧ್ಯಮದ ಹೇಳಿಕೆಗಳ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆಗೆ ಸಂಬಂಧಿಸಿದ ಪ್ರಕ್ರಿಯೆಯೂ ನಡೆದಿರುವುದು ಸಾರ್ವಜನಿಕ ದಾಖಲೆಯಲ್ಲಿದೆ ಎಂದು ತಿಳಿಸಲಾಗಿದೆ.


ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ನೀಡಿದ ಹೇಳಿಕೆಯ ಕುರಿತು ಶ್ರೀರಾಮ ಹಾಗೂ ಸೀತಾಮಾತೆಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಂಸದ್ ಮಾರ್ಗ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿರುವುದಾಗಿ ಸಾರ್ವಜನಿಕ ವರದಿಗಳು ತಿಳಿಸುತ್ತವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.


ಈ ಎಲ್ಲಾ ಘಟನೆಗಳ ಹಿನ್ನೆಲೆ ಪರಿಗಣಿಸಿದರೆ, ವೈಟ್‌ಫೀಲ್ಡ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಿಂದ ಸಾರ್ವಜನಿಕ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಧಾರ್ಮಿಕ ಸಾಮರಸ್ಯಕ್ಕೆ ಧಕ್ಕೆಯಾಗುವ ಸಾಧ್ಯತೆಯನ್ನು ಪರಿಗಣಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಕಾರ್ಯಕ್ರಮದ ಅನುಮತಿಯನ್ನು ಮರುಪರಿಶೀಲಿಸಿ ರದ್ದುಗೊಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.


ಹಾಗೆಯೇ, ಕಾರ್ಯಕ್ರಮಕ್ಕೆ ಸಂಬಂಧಿಸಿದ ಎಲ್ಲಾ ಅನುಮತಿಗಳು ಮತ್ತು ಭದ್ರತಾ ಕ್ರಮಗಳನ್ನು ಪರಿಶೀಲಿಸಿ, ಯಾವುದೇ ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಅನ್ವಯಿಸುವ ಕಾನೂನುಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top