ಕರಾವಳಿಯ ರೈಲ್ವೆ ಅಭಿವೃದ್ಧಿಗೆ ಐತಿಹಾಸಿಕ ಹೆಜ್ಜೆ

Upayuktha
0

ಮಂಗಳೂರು: ಮಂಗಳೂರಿನ ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವ ಮಹತ್ವದ ನಿರ್ಧಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ಅಭಿನಂದನೆ ತಿಳಿಸಿದ್ದಾರೆ.


ಕರಾವಳಿಯ ಜನರ ದೀರ್ಘಕಾಲದ ಬೇಡಿಕೆಗೆ ಈ ನಿರ್ಧಾರ ಐತಿಹಾಸಿಕ ಜಯವಾಗಿದೆ. ಮಂಗಳೂರಿನ ರೈಲ್ವೆ ಜಾಲವನ್ನು ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಧಿಕಾರ ವಹಿಸಿಕೊಂಡ ದಿನದಿಂದಲೇ ನಿರಂತರವಾಗಿ ಪ್ರಯತ್ನಿಸಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಗಮನಕ್ಕೆ ತಂದು, ಸಂಸತ್ತು ಸೇರಿದಂತೆ ವಿವಿಧ ವೇದಿಕೆಗಳಲ್ಲಿ ಪರಿಣಾಮಕಾರಿಯಾಗಿ ಧ್ವನಿ ಎತ್ತಿದ್ದಾರೆ. ಅವರ ನಿರಂತರ ಪ್ರಯತ್ನ ಹಾಗೂ ಬದ್ಧತೆಗೆ ಸತೀಶ್ ಕುಂಪಲ ಅವರು ಅಭಿನಂದನೆ ಸಲ್ಲಿಸಿದ್ದಾರೆ.


ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ತ್ವರಿತ ಕ್ರಮ ಕೈಗೊಂಡಿರುವ ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.


ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕರಾವಳಿಯ ಅಭಿವೃದ್ಧಿಗೆ ನೀಡುತ್ತಿರುವ ಆದ್ಯತೆಗೆ ಧನ್ಯವಾದ ಸಲ್ಲಿಸಿದ ಸತೀಶ್ ಕುಂಪಲ, ಈ ಆಡಳಿತಾತ್ಮಕ ಏಕೀಕರಣದಿಂದ ಮಂಗಳೂರಿನ ರೈಲ್ವೆ ಸೇವೆಗಳ ಸಮನ್ವಯತೆ ಹೆಚ್ಚಲಿದ್ದು, ಪ್ರಯಾಣಿಕರ ಸಮಸ್ಯೆಗಳ ಶೀಘ್ರ ಪರಿಹಾರ, ರೈಲ್ವೆ ಮೂಲಸೌಕರ್ಯಗಳ ವಿಸ್ತರಣೆ ಹಾಗೂ ಕರಾವಳಿಯ ಸಂಪರ್ಕ ವ್ಯವಸ್ಥೆಯ ಮತ್ತಷ್ಟು ಅಭಿವೃದ್ಧಿಗೆ ಹೊಸ ವೇಗ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top