ತೆಂಕನಿಡಿಯೂರು: ಇಲ್ಲಿನ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಹಾಗೂ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೋಶದ (Placement Cell) ಜಂಟಿ ಆಶ್ರಯದಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಹೊಸ ದಿಗಂತ - ಪದವಿ ಶಿಕ್ಷಣಕ್ಕೆ ಆತ್ಮವಿಶ್ವಾಸದ ಆರಂಭ’ ಎಂಬ ದಿಕ್ಸೂಚಿ (Orientation) ಕಾರ್ಯಕ್ರಮವು ಕಾಲೇಜಿನ ಎವಿ ಸಭಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು.
ಈ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ. ಗಾಂವ್ಕರ್ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪದವಿ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಪ್ರಮುಖ ಹಂತವಾಗಿದೆ. ಶೈಕ್ಷಣಿಕ ಜ್ಞಾನದ ಜೊತೆಗೆ ರೀಸನಿಂಗ್ ಮತ್ತು ಆಪ್ಟಿಟ್ಯೂಡ್, ಸಂವಹನ, ಡಿಜಿಟಲ್ ಸಿದ್ಧತೆ, ವೃತ್ತಿ ಆಯ್ಕೆಗಳು, ಜೀವನ ಕೌಶಲ್ಯಗಳನ್ನು ಬೆಳೆಸಿಕೊಂಡು ಆತ್ಮವಿಶ್ವಾಸದಿಂದ ಭವಿಷ್ಯವನ್ನು ಎದುರಿಸಬೇಕು ಎಂದು ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. IQAC ಸಂಯೋಜಕರು ಡಾ. ವಿಷ್ಣುಮೂರ್ತಿ ಪ್ರಭು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಘು ನಾಯ್ಕ್, ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜನಾಧಿಕಾರಿ ಪ್ರಶಾಂತ್ ನೀಲಾವರ, ಸಂಖ್ಯಾಶಾಸ್ತ್ರ ವಿಷಯದ ಸಹ ಪ್ರಾಧ್ಯಾಪಕರಾದ ಉಮೇಶ್ ಪೈ, ಮುಂತಾದವರು ಹಾಜರಿದ್ದರು. ಉದ್ಯೋಗ ಮಾಹಿತಿ ಅಧಿಕಾರಿ ಮರ್ವಿನ್ ಡಿಸೋಜ ಕಾರ್ಯಕ್ರಮ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಿವಿಧ ಪದವಿ ತರಗತಿಗಳ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

