ನವದೆಹಲಿ: ಅಯೋಧ್ಯಾ ರಾಮಮಂದಿರದ ವಿಷಯಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದ ಪಪ್ಪು ಯಾದವ್ ಸೇರಿದಂತೆ ಕೆಲವು ಸಂಸದರು ಖಾವಿ ಧರಿಸಿ, ಸಂತರನ್ನು ವಿಡಂಬಿಸಿದ್ದಾರೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್ (ವಿಹಿಂಪ) ದೆಹಲಿ ರಾಜ್ಯ ಘಟಕ ಮತ್ತು ದೆಹಲಿ ಸಂತ ಮಹಾಮಂಡಲ ಜಂಟಿಯಾಗಿ ಶನಿವಾರ ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾತ್ಮಕ ‘ಸದ್ಬುದ್ಧಿ ಹೋಮ’ ಕಾರ್ಯಕ್ರಮವನ್ನು ಆಯೋಜಿಸಿದ್ದವು.
ಈ ವಿಶೇಷ ಸದ್ಬುದ್ಧಿ ಹೋಮ ಕಾರ್ಯಕ್ರಮದಲ್ಲಿ ವಿಹಿಂಪ ಕೇಂದ್ರೀಯ ಮಾರ್ಗದರ್ಶಕ ಮಂಡಳಿಯ ಸದಸ್ಯರೂ ಆಗಿರುವ ಉಡುಪಿಯ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮುಖ್ಯ ಉಪಸ್ಥಿತರಿದ್ದು, ಮಾರ್ಗದರ್ಶನ ನೀಡಿದರು.
ಸಂತ ಸಮಾಜಕ್ಕೆ ಅವಮಾನ: ತೀವ್ರ ಆಕ್ರೋಶ
ಸಂಸತ್ತಿನಂತಹ ಪವಿತ್ರ ವೇದಿಕೆಯಲ್ಲಿ ನಕಲಿ ಖಾವಿ ಧರಿಸಿ ಸಾಧು-ಸಂತರನ್ನು ನಿಕೃಷ್ಟವಾಗಿ ಪ್ರತಿಬಿಂಬಿಸಿರುವುದು ದೇಶದ ಸನಾತನ ಸಂಸ್ಕೃತಿ ಮತ್ತು ಸಂತ ಸಮಾಜಕ್ಕೆ ಎಸಗಿದ ಘೋರ ಅಪಚಾರವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಚಿಹ್ನೆಗಳನ್ನು ಹಾಗೂ ಸಂತರನ್ನು ವಿಡಂಬಿಸುವುದು ಖಂಡನೀಯವಾಗಿದ್ದು, ಇಂತಹ ನಾಯಕರಿಗೆ ಯೋಗ್ಯ ಬುದ್ಧಿ ಬರಲಿ ಎಂದು ಪ್ರಾರ್ಥಿಸಿ ಈ ‘ಸದ್ಬುದ್ಧಿ ಹೋಮ’ ನಡೆಸಲಾಯಿತು.
"ಧರ್ಮ, ಸಂಸ್ಕೃತಿ ಮತ್ತು ಸಂತರ ಗೌರವಕ್ಕೆ ಧಕ್ಕೆ ತರುವಂತಹ ನಡೆಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಸಂಸತ್ತಿನಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಗಂಭೀರತೆ ಹಾಗೂ ಗೌರವದಿಂದ ನಡೆದುಕೊಳ್ಳಬೇಕು."
- ಸಂತ ಸಮುದಾಯದ ಮುಖಂಡರು
ಈ ಪ್ರತಿಭಟನಾ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ನೂರಾರು ಸಾಧು-ಸಂತರು, ವಿಶ್ವ ಹಿಂದೂ ಪರಿಷತ್ ಹಾಗೂ ವಿವಿಧ ಹಿಂದೂ ಸಂಘಟನೆಗಳ ಪ್ರಮುಖ ನಾಯಕರು ಮತ್ತು ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿ ತಮ್ಮ ಪ್ರತಿಭಟನೆಯನ್ನು ದಾಖಲಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

