ಈ ಮಹತ್ವದ ಕಾರ್ಯಾಗಾರವು ಕಾಸರಗೋಡಿನ ಕನ್ನಡ ಅಧ್ಯಾಪಕ ಭವನದಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 3:30 ರವರೆಗೆ ನಡೆಯಲಿದೆ.
ಕಾರ್ಯಾಗಾರದ ಮುಖ್ಯ ಉದ್ದೇಶ ಮತ್ತು ವಿಷಯಗಳು:
1956ರ ಭಾಷಾವಾರು ಪ್ರಾಂತ್ಯ ರಚನೆ ಸಂದರ್ಭದಲ್ಲಿ ಕಾಸರಗೋಡನ್ನು ಕೇರಳಕ್ಕೆ ಸೇರಿಸಲಾಯಿತಾದರೂ, ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಉಳಿವಿಗಾಗಿ ಹಿರಿಯರು ನಿರಂತರ ಹೋರಾಟ ನಡೆಸಿದ್ದಾರೆ. ಇದರ ಫಲವಾಗಿ ಕೇರಳ ಸರಕಾರವು ಕನ್ನಡಿಗರ ಹಿತರಕ್ಷಣೆಗಾಗಿ ಅನೇಕ ಆದೇಶಗಳನ್ನು, ಸುತ್ತೋಲೆಗಳನ್ನು ಹೊರಡಿಸಿದೆ ಹಾಗೂ ಹೈಕೋರ್ಟ್ ಕೂಡ ಹಲವಾರು ತೀರ್ಪುಗಳನ್ನು ನೀಡಿದೆ.
ಆದರೆ ಇಂದಿನ ಯುವಜನತೆಗೆ ಈ ಕುರಿತು ಮಾಹಿತಿ ಕೊರತೆ ಇರುವುದರಿಂದ, ಮುಂದಿನ ದಿನಗಳಲ್ಲಿ ಕನ್ನಡದ ಅಸ್ತಿತ್ವಕ್ಕೆ ಧಕ್ಕೆಯಾಗದಂತೆ ತಡೆಯಲು ಯುವ ಪೀಳಿಗೆಯನ್ನು ಸಜ್ಜುಗೊಳಿಸುವುದು ಈ ಕಾರ್ಯಾಗಾರದ ಮುಖ್ಯ ಉದ್ದೇಶವಾಗಿದೆ.
ಕಾರ್ಯಾಗಾರದಲ್ಲಿ ಮುಖ್ಯವಾಗಿ ಕೇರಳದಲ್ಲಿ ಕನ್ನಡಿಗರ ಹಿತರಕ್ಷಣೆಗಾಗಿ ಸರಕಾರ ಹೊರಡಿಸಿದ ಆದೇಶಗಳು ಹಾಗೂ ಸುತ್ತೋಲೆಗಳು, ಕನ್ನಡಿಗರ ಪರವಾಗಿ ಹೈಕೋರ್ಟ್ ನೀಡಿದ ಪ್ರಮುಖ ತೀರ್ಪುಗಳು; ಪ್ರಸ್ತುತ ಗಡಿನಾಡಿನಲ್ಲಿ ಕನ್ನಡಿಗರು ಎದುರಿಸುತ್ತಿರುವ ಬಿಗಡಾಯಿಸಿದ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರೋಪಾಯಗಳ ಬಗ್ಗೆ ಚರ್ಚಿಸಲಾಗುವುದು.
ಸಂಪನ್ಮೂಲ ವ್ಯಕ್ತಿ:
ಕೇರಳ ಲೋಕಸೇವಾ ಆಯೋಗದ ನಿವೃತ್ತ ಅಂಡರ್ ಸೆಕ್ರೆಟರಿ ಹಾಗೂ ಕರಂದಕ್ಕಾಡಿನ ಶಿಕ್ಷಣ, ಉದ್ಯೋಗ ಮಾರ್ಗದರ್ಶನ ಕೇಂದ್ರದ ನಿರ್ದೇಶಕರಾದ ಶ್ರೀ ಗಣೇಶ ಪ್ರಸಾದ್ ಪಾಣೂರು ಅವರು ಕಾರ್ಯಾಗಾರದಲ್ಲಿ ಉಪಯುಕ್ತ ಮಾಹಿತಿ ನೀಡಲಿದ್ದಾರೆ.
ವಿಶೇಷ ಗಮಕ ವಾಚನ- ವ್ಯಾಖ್ಯಾನ:
ಕಾರ್ಯಾಗಾರದ ಬಳಿಕ, ಮಧ್ಯಾಹ್ನ 3:30 ರಿಂದ 4:30 ರವರೆಗೆ ಉದಯೋನ್ಮುಖ ಗಮಕಿಗಳಿಂದ ‘ಗಮಕ ವಾಚನ-ವ್ಯಾಖ್ಯಾನ’ ಕಾರ್ಯಕ್ರಮ ನೆರವೇರಲಿದೆ.
ಹೆಸರು ನೋಂದಣಿ ಮತ್ತು ವಿವರಗಳು:
ಈ ಕಾರ್ಯಾಗಾರದಲ್ಲಿ ಭಾಗವಹಿಸಲು 40 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಹೆಸರು ನೋಂದಣಿಗಾಗಿ ಸಂಪರ್ಕಿಸಿ:
ತೆಕ್ಕೆಕೆರೆ ಶಂಕರನಾರಾಯಣ ಭಟ್ (ಅಧ್ಯಕ್ಷರು, ಗಮಕ ಕಲಾ ಪರಿಷತ್ತು ಕೇರಳ ಗಡಿನಾಡ ಘಟಕ)– ಮೊಬೈಲ್: 9746631456
ವಿ.ಬಿ. ಕುಳಮರ್ವ (ಕಾರ್ಯದರ್ಶಿ, ಗಮಕ ಕಲಾ ಪರಿಷತ್ತು ಕೇರಳ ಗಡಿನಾಡ ಘಟಕ)– ಮೊಬೈಲ್: 9446484585
ಗಡಿನಾಡಿನ ಕನ್ನಡಿಗರು ಮತ್ತು ಆಸಕ್ತ ಯುವಜನರು ಈ ಕಾರ್ಯಾಗಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

