ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಎಂ.ಎಸ್ಸಿ. ಮನೋವಿಜ್ಞಾನ ವಿಭಾಗಕ್ಕೆ ಶೇ.100 ಫಲಿತಾಂಶ

Upayuktha
0


ಶಿವಮೊಗ್ಗ: ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಮನೋವಿಜ್ಞಾನ ವಿಭಾಗದ ಎಂ.ಎಸ್ಸಿ. ಮನೋವಿಜ್ಞಾನ ವಿದ್ಯಾರ್ಥಿಗಳು ಶೇ.100ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ್ದಾರೆ.


ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು A++ ಶ್ರೇಣಿ ಹಾಗೂ 03 ವಿದ್ಯಾರ್ಥಿಗಳು A+ ಶ್ರೇಣಿ ಪಡೆದುಕೊಂಡಿದ್ದು, ಕಾಲೇಜು ಹಾಗೂ ಮನೋವಿಜ್ಞಾನ ವಿಭಾಗದ ಶೈಕ್ಷಣಿಕ ಗುಣಮಟ್ಟಕ್ಕೆ ಮತ್ತೊಂದು ಹೆಮ್ಮೆಯ ಗರಿಯನ್ನು ಸೇರಿಸಿದ್ದಾರೆ.


ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಮನೋವಿಜ್ಞಾನ ವಿಭಾಗದ ಅಧ್ಯಾಪಕ ವೃಂದ ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಕಲಿಕೆಯ ಬದ್ಧತೆ, ಸಂಶೋಧನಾ ಮನೋಭಾವ ಹಾಗೂ ಅಧ್ಯಾಪಕರ ಮಾರ್ಗದರ್ಶನ ಈ ಅತ್ಯುತ್ತಮ ಫಲಿತಾಂಶಕ್ಕೆ ಕಾರಣವಾಗಿದೆ ಎಂದು ಪ್ರಾಂಶುಪಾಲರು ತಿಳಿದ್ದಾರೆ.


ಮನೋವಿಜ್ಞಾನ ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಪ್ರಾಯೋಗಿಕ ತರಬೇತಿ, ಸಂಶೋಧನೆ ಹಾಗೂ ವೃತ್ತಿಪರ ಕೌಶಲ್ಯಗಳಿಗೆ ಆದ್ಯತೆ ನೀಡುತ್ತಿರುವ ಕಾಲೇಜು, ವಿದ್ಯಾರ್ಥಿಗಳನ್ನು ಸಮಾಜಮುಖಿ ಹಾಗೂ ಸಮರ್ಥ ವೃತ್ತಿಪರರನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ.


ವಿಶೇಷವಾಗಿ, ಮಾನಸ ನರ್ಸಿಂಗ್ ಹೋಮ್‌ನ ಮನೋವೈದ್ಯಕೀಯ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ದೊರೆಯುವ ನೇರ ಕ್ಲಿನಿಕಲ್ ಎಕ್ಸ್‌ಪೋಶರ್ ಮತ್ತು ಪ್ರಾಯೋಗಿಕ ಅನುಭವವು ಅವರ ವೃತ್ತಿಪರ ಕೌಶಲ್ಯಗಳನ್ನು ವೃದ್ಧಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಇಂದಿನ ಸಮಾಜದ ಮಾನಸಿಕ ಆರೋಗ್ಯ ಕ್ಷೇತ್ರದ ಅಗತ್ಯತೆಗಳು ಹಾಗೂ ಉದ್ಯೋಗ ಮಾರುಕಟ್ಟೆಯ ಬದಲಾಗುತ್ತಿರುವ ಬೇಡಿಕೆಗಳಿಗೆ ಅನುಗುಣವಾಗಿ ಸಮರ್ಥ ವೃತ್ತಿಪರರಾಗಿ ರೂಪುಗೊಳ್ಳಲು ನೆರವಾಗುತ್ತಿದೆ.


ಇದರ ಜೊತೆಗೆ, ಈ ಸಾಲಿನ ಸುಮಾರು 21 ವಿದ್ಯಾರ್ಥಿಗಳು ಈಗಾಗಲೇ ಕರ್ನಾಟಕದ ವಿವಿಧ ಭಾಗಗಳು ಹಾಗೂ ರಾಜ್ಯದ ಹೊರಗಿನ ವಿವಿಧ ಸಂಸ್ಥೆಗಳು ಮತ್ತು ವೃತ್ತಿಪರ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆದುಕೊಂಡಿರುವುದು ವಿಶೇಷವಾಗಿದ್ದು, ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಗುಣಮಟ್ಟದ ಶಿಕ್ಷಣ, ಪ್ರಾಯೋಗಿಕ ತರಬೇತಿ ಹಾಗೂ ವೃತ್ತಿಪರ ಕೌಶಲ್ಯಾಭಿವೃದ್ಧಿಯ ಪರಿಣಾಮಕಾರಿತ್ವಕ್ಕೆ ಸಾಕ್ಷಿಯಾಗಿದೆ.   

          

ವಿದ್ಯಾರ್ಥಿಗಳ ಈ ಅತ್ಯುತ್ತಮ ಸಾಧನೆಗೆ ನಿರ್ದೇಶಕಿ ರಜನಿ ಪೈ, ಶೈಕ್ಷಣಿಕ ನಿರ್ದೇಶಕಿ ಪ್ರೀತಿ ವಿ. ಶಾನಭಾಗ್, ಡಾ. ವಾಮನ್ ಶಾನಭಾಗ್, ಪ್ರೊ. ರಾಜೇಂದ್ರ ಚೆನ್ನಿ, ಪ್ರೊ. ರಾಮಚಂದ್ರ ಬಾಳಿಗಾ, ಕಾಲೇಜಿನ ಪ್ರಾಂಶುಪಾಲರು, ಮನೋವಿಜ್ಞಾನ ವಿಭಾಗದ ಅಧ್ಯಾಪಕ ವೃಂದ ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿ, ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಮತ್ತು ವೃತ್ತಿಜೀವನಕ್ಕೆ ಶುಭ ಹಾರೈಸಿದ್ದಾರೆ.


ಕಾಲೇಜಿನಲ್ಲಿ ಲಭ್ಯವಿರುವ ವಿವಿಧ ಕೋರ್ಸ್‌ಗಳು:


ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ BA, B.Sc., B.Com., BCA ಮತ್ತು BSW ಪದವಿ ಕೋರ್ಸ್‌ಗಳು ಲಭ್ಯವಿವೆ. ಇದರೊಂದಿಗೆ ವಿಶೇಷೀಕರಣದೊಂದಿಗೆ M.Sc. Psychology ಸ್ನಾತಕೋತ್ತರ ಕೋರ್ಸ್ ಹಾಗೂ Online PG Diploma in Counselling ಕೋರ್ಸ್‌ಗಳನ್ನು ಸಹ ನೀಡಲಾಗುತ್ತಿದೆ. ಜೊತೆಗೆ B.Sc. Nursing ಕೋರ್ಸ್ ಕೂಡ ಲಭ್ಯವಿದ್ದು, ವಿದ್ಯಾರ್ಥಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಶಿಕ್ಷಣ ಮತ್ತು ವೃತ್ತಿಪರ ಬೆಳವಣಿಗೆಗೆ ಅವಕಾಶ ಕಲ್ಪಿಸಲಾಗುತ್ತಿದೆ.


“ವಿದ್ಯಾರ್ಥಿಗಳು ತಮ್ಮ ಜ್ಞಾನ, ಸಂಶೋಧನಾ ಸಾಮರ್ಥ್ಯ ಮತ್ತು ವೃತ್ತಿಪರ ಕೌಶಲ್ಯಗಳ ಮೂಲಕ ಸಮಾಜದ ಮಾನಸಿಕ ಆರೋಗ್ಯ ಹಾಗೂ ಯೋಗಕ್ಷೇಮಕ್ಕೆ ಅರ್ಥಪೂರ್ಣ ಕೊಡುಗೆ ನೀಡುವಂತಾಗಲಿ” ಎಂದು ಕಾಲೇಜಿನ ಆಡಳಿತ ಮಂಡಳಿ ಹಾಗೂ ಅಧ್ಯಾಪಕ ವೃಂದ ಶುಭ ಹಾರೈಸಿದೆ.


ಎಂ.ಎಸ್ಸಿ. ಮನೋವಿಜ್ಞಾನ ವಿದ್ಯಾರ್ಥಿಗಳ ಈ ಶೇ.100 ಫಲಿತಾಂಶವು ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು, ಶಿವಮೊಗ್ಗದ ಶೈಕ್ಷಣಿಕ ಸಾಧನೆಯ ಹಿರಿಮೆಗೆ ಮತ್ತೊಂದು ಮಹತ್ವದ ಮೈಲಿಗಲ್ಲಾಗಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top