ಐಎನ್‌ಸಿ ಮಾನ್ಯತೆ ಪಡೆದ 'ಕಟೀಲ್ ಅಶೋಕ್ ಪೈ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜು'

Upayuktha
0


ಶಿವಮೊಗ್ಗ: ಇಲ್ಲಿನ ಪ್ರತಿಷ್ಠಿತ ಮಾನಸ ಟ್ರಸ್ಟ್‌ನ ಶಿಕ್ಷಣ ಸಂಸ್ಥೆಯಾಗಿರುವ 'ಕಟೀಲ್ ಅಶೋಕ್ ಪೈ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ' ಬೋಧಿಸಲಾಗುತ್ತಿರುವ ಬಿ.ಎಸ್ಸಿ ನರ್ಸಿಂಗ್ (B.Sc Nursing) ಪದವಿ ಕೋರ್ಸ್‌ಗೆ ಭಾರತದ ಅತ್ಯುನ್ನತ ಸಂಸ್ಥೆಯಾದ ಇಂಡಿಯನ್ ನರ್ಸಿಂಗ್ ಕೌನ್ಸಿಲ್ (INC) ಮಾನ್ಯತೆ ನೀಡಿ ಆದೇಶಿಸಿದೆ.


2024ರಿಂದ ಆರಂಭಗೊಂಡಿರುವ ಈ ಕೋರ್ಸ್‌ಗೆ ಈಗಾಗಲೇ ಕರ್ನಾಟಕ ನರ್ಸಿಂಗ್ ಕೌನ್ಸಿಲ್ (KNC) ಮಾನ್ಯತೆ ದೊರೆತಿದೆ. ಇದೀಗ ರಾಷ್ಟ್ರ ಮಟ್ಟದ ಮಾನ್ಯತೆಯೂ ಲಭಿಸಿರುವುದು ಸಂಸ್ಥೆಯ ಶೈಕ್ಷಣಿಕ ಗುಣಮಟ್ಟಕ್ಕೆ ಹಿಡಿದ ಕನ್ನಡಿಯಾಗಿದೆ.


ಪ್ರವೇಶಾತಿ ಪ್ರಾರಂಭ:

ಸಂಸ್ಥೆಯಲ್ಲಿ ಅತ್ಯುತ್ತಮ ಮೂಲಸೌಕರ್ಯಗಳು, ಪರಿಣಿತ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಪ್ರಾಯೋಗಿಕ ತರಬೇತಿಗಾಗಿ (Practical Training) ಸಕಲ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನರ್ಸಿಂಗ್ ಪದವಿ ಕೋರ್ಸ್‌ಗೆ ಈಗಾಗಲೇ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಕ್ರಿಯೆಗಳು ಪ್ರಾರಂಭವಾಗಿವೆ ಎಂದು ಕಾಲೇಜಿನ ಪ್ರಾಚಾರ್ಯರಾದ ಶ್ರೀ ಮಲ್ಲಿಕಾರ್ಜುನ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮತ್ತು ಪ್ರವೇಶಾತಿಗಾಗಿ ಕಾಲೇಜು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top