ಮಂಗಳೂರು: ಇಲ್ಲಿನ ಕೊಡಿಯಾಲ್‌ಬೈಲ್‌ನ ಕೆನರಾ ಶಾಲೆ ಹಾಗೂ ಕೆನರಾ ಪ್ರೌಢಶಾಲೆಯ ಸಹಯೋಗದೊಂದಿಗೆ ಶಾಲಾ ಮುಖ್ಯ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.
ಬೆಳಿಗ್ಗೆ 8 ಗಂಟೆಗೆ ಶಾಲಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿತು. ಭಾರತೀಯ ಸಶಸ್ತ್ರ ಪಡೆಯ ಮಾಜಿ ಯೋಧರಾದ ಕ್ಯಾಪ್ಟನ್ ಕಾರ್ಯಪ್ಪ ಪಟ್ಟಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣದ ಬಳಿಕ ಶ್ರೀ ಸುಧೀಂದ್ರ ಸಭಾಂಗಣದಲ್ಲಿ ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕೆನರಾ ಶಾಲೆಯ ಹಾಗೂ ಕೆನರಾ ಪ್ರೌಢಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳ ಗಾಯನ, ನೃತ್ಯ ಹಾಗೂ ರೂಪಕಗಳ ಮೂಲಕ ಭಾರತದ ಶ್ರೀಮಂತ ಪರಂಪರೆ, ವೈವಿಧ್ಯಮಯ ಸಂಸ್ಕೃತಿ ಮತ್ತು ದೇಶಾಭಿಮಾನವನ್ನು ಮನಮೋಹಕವಾಗಿ ಪ್ರದರ್ಶಿಸಿ ಸಭಿಕರ ಮೆಚ್ಚುಗೆಗೆ ಪಾತ್ರರಾದರು.
ಮುಖ್ಯ ಅತಿಥಿಗಳಾದ ಕ್ಯಾಪ್ಟನ್ ಕಾರ್ಯಪ್ಪ ಪಟ್ಟಡ ಅವರು ಎನ್‌ಸಿಸಿ ಕೆಡೆಟ್‌ಗಳಿಗೆ 'ಎ' ಗ್ರೇಡ್ ಪ್ರಮಾಣಪತ್ರ ನೀಡಿ ಗೌರವಿಸಿದರು. ನಂತರ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು "ಯುವಜನತೆಯು ದೇಶಪ್ರೇಮ, ಶಿಸ್ತು ಹಾಗೂ ರಾಷ್ಟ್ರದ ಮೇಲಿನ ಕರ್ತವ್ಯ ಪ್ರಜ್ಞೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅದೇ ರೀತಿ ರಾಷ್ಟ್ರೀಯ ಭದ್ರತಾ ಪಡೆ (NDA)ಗೆ ಹೆಚ್ಚು ಹೆಚ್ಚು ಯುವಕರು ಸೇರಲು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀಮತಿ ರೇಷ್ಮಾ ಕಾರ್ಯಪ್ಪ ಪಟ್ಟಡ , ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಉಪಾಧ್ಯಕ್ಷರು ಹಾಗೂ ಕೆನರಾ ಶಾಲೆಯ ಸಂಚಾಲಕರಾದ ಶ್ರೀ ಕೆ ಸುರೇಶ್ ಕಾಮತ್, ಕೆನರಾ ಪ್ರೌಢಶಾಲೆಯ ಸಂಚಾಲಕಿಯಾದ ಅಶ್ವಿನಿ ಕಾಮತ್, ಕೆನರಾ ಪ್ರೌಢಶಾಲೆಯ ಮುಖ್ಯೋಪಾಧ್ಶಾಯಿನಿ ಶ್ರೀಮತಿ ಇಂದುಮತಿ, ಕೆನರಾ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಕವಿತಾ ಮೌರ್ಯ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಹೆಚ್ಚಿಸಿದರು. ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನದ ಭಾವನೆಯೊಂದಿಗೆ ನಡೆದ ಕಾರ್ಯಕ್ರಮವು ಎಲ್ಲರ ಮನದಲ್ಲಿ ಅಚ್ಚಳಿಯದ ನೆನಪಾಗಿ ಉಳಿಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

