ಕುಳಾಯಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.) ಕುಳಾಯಿ ಇದರ 55 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಇತ್ತೀಚೆಗೆ ಇಲ್ಲಿನ ಮಹಿಳಾ ಮಂಡಲದ ಶ್ರೀ ಗಣೇಶ ಕಲಾ ಮಂಟಪದಲ್ಲಿ ಸಮಿತಿಯ ಅಧ್ಯಕ್ಷರಾದ ವಿಠ್ಠಲ್ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.
ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ ಯವರು ಮಾತನಾಡಿ, ದಿನಾಂಕ 14.09.2026 ರಿಂದ 16.09.2026 ರವರೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ಜರಗಲಿರುವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ಕುರಿತು ವಿವರವಾದ ಮಾಹಿತಿ ನೀಡಿ, ಉತ್ಸವದ ಯಶಸ್ಸಿಗೆ ಸರ್ವರ ಸಹಕಾರವನ್ನು ಕೋರಿದರು.
ಸಮಿತಿಯ ಗೌರವಾಧ್ಯಕ್ಷರಾದ ಚಂದ್ರಶೇಖರ ಕೆ. ಪಿ. ರವರು ಶುಭ ಹಾರೈಸಿ, ಆಮಂತ್ರಣ ಪತ್ರಿಕೆಯನ್ನು ಊರಿನ ಮನೆ ಮನೆಗೆ ತಲುಪಿಸುವ ಕಾರ್ಯದಲ್ಲಿ ಸರ್ವ ಸದಸ್ಯರು ಸಕ್ರಿಯವಾಗಿ ತೊಡಗಿಸಿಕೊಂಡು ಸಹಕರಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಠ್ಠಲ್ ಸಾಲಿಯಾನ್ ಅವರು ಮಾತನಾಡಿ, "ಶ್ರೀ ಬಾಲ ಗಂಗಾಧರ ತಿಲಕ್ ರವರ ಆಶಯದಂತೆ ಬಲಿಷ್ಠ ಹಿಂದೂ ಸಮಾಜದ ಸಂಘಟನೆಗಾಗಿ ಊರಿನ ಎಲ್ಲಾ ಸಂಘ ಸಂಸ್ಥೆಗಳು, ಭಜನಾ ಮಂಡಳಿಗಳು, ಸಮಾಜ ಬಾಂಧವರು ಹಾಗೂ ಭಗವದ್ಭಕ್ತರು ಭೇದಭಾವವಿಲ್ಲದೆ ಕುಳಾಯಿ ಶ್ರೀ ಗಣೇಶೋತ್ಸವದಲ್ಲಿ ಭಾಗವಹಿಸಿ, ಶ್ರೀ ಗಣಪತಿ ದೇವರ ಕೃಪೆಗೆ ಪಾತ್ರರಾಗಬೇಕು" ಎಂದು ವಿನಂತಿಸಿಕೊಂಡರು.
ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರುಗಳು ಹಾಗೂ ಮಹಿಳಾ ಮಂಡಲ (ರಿ.) ಕುಳಾಯಿ ಇದರ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

